ಶನಿವಾರ, ಜನವರಿ 29, 2022
17 °C

ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಗೆ ಭಾರತ ತಂಡದಲ್ಲಿ ಮೂವರು ಕನ್ನಡಿಗರು?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ (ಪಿಟಿಐ): ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ತೆರಳಲಿರುವ ಭಾರತ ತಂಡದಲ್ಲಿ ಮೂವರು ಕನ್ನಡಿಗರು ಸ್ಥಾನ ಪಡೆಯುವ ಸಾಧ್ಯತೆ ಇದೆ.

ಈಚೆಗೆ ನ್ಯೂಜಿಲೆಂಡ್ ಎದುರಿನ ಟೆಸ್ಟ್‌ನಲ್ಲಿ ಶತಕ ಗಳಿಸಿದ ಮಯಂಕ್ ಅಗರವಾಲ್, ಗಾಯದಿಂದ ಚೇತರಿಸಿಕೊಂಡಿರುವ ಕೆ.ಎಲ್. ರಾಹುಲ್ ಮತ್ತು ಮಧ್ಯಮ ವೇಗಿ ಪ್ರಸಿದ್ಧ ಕೃಷ್ಣ ಅವರು ಸ್ಥಾನ ಪಡೆಯುವ ನಿರೀಕ್ಷೆ ಇದೆ.

21 ಆಟಗಾರರ ತಂಡವನ್ನು ಪ್ರಕಟಿಸುವ ಸಾಧ್ಯತೆ ಇದ್ದು. ಆವೇಶ್ ಖಾನ್, ಪ್ರಿಯಾಂಕ್ ಪಾಂಚಾಲ್ ಅವರಿಗೂ ಅವಕಾಶ ಸಾಧ್ಯತೆ ಇದೆ.

ಸಂಭವನೀಯ ತಂಡ: ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ, ಕೆ.ಎಲ್. ರಾಹುಲ್, ಚೇತೇಶ್ವರ್ ಪೂಜಾರ, ಅಜಿಂಕ್ಯ ರಹಾನೆ, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ವಿಕೆಟ್‌ಕೀಪರ್), ಆರ್. ಅಶ್ವಿನ್, ರವೀಂದ್ರ ಜಡೇಜ, ಜಸ್‌ಪ್ರೀತ್ ಬೂಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಪ್ರಸಿದ್ಧಕೃಷ್ಣ, ಆವೇಶ್ ಖಾನ್, ದೀಪಕ್ ಚಾಹರ್, ವೃದ್ಧಿಮಾನ್ ಸಹಾ (ವಿಕೆಟ್‌ಕೀಪರ್), ಮಯಂಕ್ ಅಗರವಾಲ್, ಶುಭಮನ್ ಗಿಲ್, ಹನುಮವಿಹಾರಿ, ಅಭಿಮನ್ಯು ಈಶ್ವರನ್, ಪ್ರಿಯಾಂಕ್ ಪಾಂಚಾಲ್, ಜಯಂತ್ ಯಾದವ್.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು