ದುಬೈ: ಭಾರತದ ಎಡಗೈ ಆಟಗಾರ ತಿಲಕ್ ವರ್ಮಾ ಅವರು ಐಸಿಸಿ ಪುರುಷರ ಟಿ20 ಬ್ಯಾಟರ್ಗಳ ರ್ಯಾಂಕಿಂಗ್ ಪಟ್ಟಿಯಲ್ಲಿ ಒಂದು ಸ್ಥಾನ ಬಡ್ತಿ ಪಡೆದು ಮೂರನೇ ಸ್ಥಾನಕ್ಕೇರಿದ್ದಾರೆ. ಬುಧವಾರ ಪ್ರಕಟವಾದ ಈ ಪಟ್ಟಿಯ ಬೌಲರ್ಗಳ ವಿಭಾಗದಲ್ಲಿ ವರುಣ್ ಚಕ್ರವರ್ತಿ ಮತ್ತು ರವಿ ಬಿಷ್ಣೋಯಿ ಕ್ರಮವಾಗಿ ಮೂರನೇ ಮತ್ತು ಏಳನೇ ಸ್ಥಾನ ಉಳಿಸಿಕೊಂಡಿದ್ದಾರೆ.

ಬ್ಯಾಟರ್ಗಳ ಪಟ್ಟಿಯಲ್ಲಿ ಆಸ್ಟ್ರೇಲಿಯಾದ ತಾರೆ ಟ್ರಾವಿಸ್ ಹೆಡ್ (856 ರೇಟಿಂಗ್ ಪಾಯಿಂಟ್) ಮೊದಲ ಸ್ಥಾನದಲ್ಲಿದ್ದರೆ, ಆರಂಭ ಆಟಗಾರ ಅಭಿಷೇಕ್ ಶರ್ಮಾ ಎರಡನೇ ಸ್ಥಾನ (829) ಕಾಪಾಡಿಕೊಂಡಿದ್ದಾರೆ. ತಿಲಕ್ ವರ್ಮಾ 804 ಪಾಯಿಂಟ್ಸ್ ಗಳಿಸಿದ್ದಾರೆ.

ಟಿ20 ತಂಡದ ನಾಯಕ ಸೂರ್ಯಕುಮಾರ್ ಯಾದವ್ (739) ಒಂದು ಸ್ಥಾನ ಕೆಳಕ್ಕೆ ಸರಿದಿದ್ದು ಆರನೇ ಸ್ಥಾನದಲ್ಲಿದ್ದಾರೆ. ಅವರು ಅಗ್ರ 10ರ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಭಾರತದ ಮೂರನೇ ಆಟಗಾರ.

ಬೌಲರ್ಗಳ ಪಟ್ಟಿಯಲ್ಲಿ ಚಕ್ರವರ್ತಿ (706) ಮತ್ತು ಬಿಷ್ಣೋಯಿ (674) ಜೊತೆ ವೇಗದ ಬೌಲರ್ ಅರ್ಷದೀಪ್ ಸಿಂಗ್ (653) ಅವರು ಅಗ್ರ 10ರಲ್ಲಿ ಸ್ಥಾನ ಪಡೆದಿದ್ದಾರೆ. ನ್ಯೂಜಿಲೆಂಡ್ನ ವೇಗಿ ಜೇಕಬ್ ಡಫಿ (723) ಅಗ್ರಸ್ಥಾನ ಕಾಪಾಡಿಕೊಂಡಿದ್ದು, ಇಂಗ್ಲೆಂಡ್ನ ಸ್ಪಿನ್ನರ್ ಅದಿಲ್ ರಶೀದ್ (710) ಎರಡನೇ ಸ್ಥಾನದಲ್ಲಿದ್ದಾರೆ.

ಹಾರ್ದಿಕ್ ಪಾಂಡ್ಯ ಆಲ್ರೌಂಡರ್ಗಳ ವಿಭಾಗದಲ್ಲಿ 252 ರೇಟಿಂಗ್ ಪಾಯಿಂಟ್ಗಳೊಡನೆ ಅಗ್ರಸ್ಥಾನ ಪಡೆದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.