ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಐಪಿಎಲ್ ಪಂದ್ಯದಲ್ಲಿ ಆಸ್ಟ್ರೇಲಿಯಾದ ಆಟಗಾರ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಫೋಟಕ ಬ್ಯಾಟರ್ ಟಿಮ್ ಡೇವಿಡ್ ದಾಖಲೆಯೊಂದನ್ನು ಬರೆದಿದ್ದಾರೆ.

ಕಳೆದ ಆವೃತಿಯಲ್ಲಿ ಆರ್ಸಿಬಿ ತಂಡವು ಪ್ರಶಸ್ತಿ ಗೆಲ್ಲುವಲ್ಲಿ ಡೇವಿಡ್ ಪ್ರಮುಖ ಪಾತ್ರವಹಿಸಿದ್ದರು. ಇದೀಗ ಐಪಿಎಲ್ನಲ್ಲಿ ಅತೀ ಕಡಿಮೆ ಎಸೆತಗಳಲ್ಲಿ 1,000 ರನ್ಗಳ ಗಡಿದಾಟಿದ ಎರಡನೇ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಟಿಮ್ ಡೇವಿಡ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ 2021ರಲ್ಲಿ ಐಪಿಎಲ್ಗೆ ಪದಾರ್ಪಣೆ ಮಾಡಿದ್ದರು. ನಂತರ ಮುಂಬೈ ಇಂಡಿಯನ್ಸ್ ದಂಡದಲ್ಲಿ ಫಿನಿಷರ್ ಆಗಿದ್ದರು. 2025ರ ಐಪಿಎಲ್ಗೂ ಮುನ್ನ ಆರ್ಸಿಬಿ ಫ್ರಾಂಚೈಸಿ ಮತ್ತೆ ಅವರನ್ನು ಖರೀದಿಸಿದೆ.

ಸ್ಫೋಟಕ ಆಟಕ್ಕೆ ಹೆಸರುವಾಸಿಯಾಗಿರುವ ಡೇವಿಡ್ ಅವರು ಅಗ್ರಕ್ರಮಾಂಕದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಬಲ ತಂದುಕೊಟ್ಟಿದ್ದಾರೆ. ಇವರು ಈವರೆಗೆ ರಾಯಲ್ ಚಾಲೆಂಜರ್ಸ್ ಪರ 361 ರನ್ಗಳನ್ನು ಸಿಡಿಸಿದ್ದಾರೆ.

ಡೆಲ್ಲಿ ಕ್ಯಾಪಿಟಲ್ಸ್ ತಂಡದ ವಿರುದ್ಧದ ಪಂದ್ಯದಲ್ಲಿ ಟೀಮ್ ಡೇವಿಡ್ 17 ಎಸೆತಗಳಲ್ಲಿ 3 ಬೌಂಡರಿ 1 ಸಿಕ್ಸರ್ ಸಹಿತ 26 ರನ್ ಗಳಿದರು. ಈ ವೇಳೆ ಅವರು ಐಪಿಎಲ್ನಲ್ಲಿ ಸಾವಿರ ರನ್ಗಳ ಮೈಲಿಗಲ್ಲನ್ನು ದಾಟಿದರು.

ಈವರೆಗೆ ಐಪಿಎಲ್ನಲ್ಲಿ 50 ಇನಿಂಗ್ಸ್ ಆಡಿರುವ ಅವರು, 36.39 ಸರಾಸರಿಯಲ್ಲಿ 1,019 ರನ್ ಗಳಿಸಿದ್ದಾರೆ. ಇದರಲ್ಲಿ 2 ಅರ್ಧಶತಕ ಸೇರಿವೆ. ಅಜೇಯ 70 ರನ್ ಇವರ ಗರಿಷ್ಠ ರನ್ ಆಗಿದೆ.

ಡೇವಿಡ್ ಅವರು ಸಾವಿರ ರನ್ ಕಲೆಹಾಕಲು 560 ಎಸೆತಗಳನ್ನು ತೆಗೆದುಕೊಂಡರೆ, ಕೋಲ್ಕತ್ತ ನೈಟ್ ರೈಡರ್ಸ್ ತಂಡದ ಮಾಜಿ ಆಟಗಾರ ಆಂಡ್ರೆ ರಸೆಲ್ 545 ಎಸೆತಗಳನ್ನು ತೆಗೆದುಕೊಂಡಿದ್ದರು. ಆ ಮೂಲಕ ರಸೆಲ್ ಬಳಿಕ ಐಪಿಎಲ್ನಲ್ಲಿ ಕಡಿಮೆ ಎಸೆತಗಳಲ್ಲಿ 1000 ರನ್ಗಳ ಗಡಿ ದಾಟಿದ ಎರಡನೇ ಬ್ಯಾಟರ್ ಹಾಗೂ ಆರ್ಸಿಬಿ ಪರ ವೇಗವಾಗಿ ಈ ಸಾಧನೆ ಮಾಡಿದ ಮೊದಲ ಆಟಗಾರ ಎಂಬ ದಾಖಲೆ ತಮ್ಮದಾಗಿಸಿಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.