ಗುರುವಾರ , ಸೆಪ್ಟೆಂಬರ್ 23, 2021
22 °C

ಮೊದಲ ಎಸೆತದಲ್ಲಿ ಸಿಕ್ಸರ್‌ ಹೊಡೆಯುವುದಾಗಿ ಎಲ್ಲರಿಗೂ ತಿಳಿಸಿದ್ದೆ: ಇಶಾನ್ ಕಿಶನ್

ಪ್ರಜಾವಾಣಿ ವೆಬ್‌ ಡೆಸ್ಕ್‌‌ Updated:

ಅಕ್ಷರ ಗಾತ್ರ : | |

ಪದಾರ್ಪಣೆಯ ಪಂದ್ಯದ ಮೊದಲ ಎಸೆತದಲ್ಲೇ ಯುವ ಎಡಗೈ ಬ್ಯಾಟ್ಸ್‌ಮನ್ ಇಶಾನ್ ಕಿಶನ್ ಸಿಕ್ಸರ್‌ ಹೊಡೆದಿದ್ದಾರೆ.

ಪಂದ್ಯದ ನಂತರ ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್‌ನ ನೇರ ಪ್ರಸಾರದಲ್ಲಿ ಭಾರತದ ಮಾಜಿ ಕ್ರಿಕೆಟಿಗ ಅಜಯ್ ಜಡೇಜಾ ಅವರೊಂದಿಗೆ 'ಸಿಕ್ಸರ್‌' ವಿಚಾರವಾಗಿ ಇಶಾನ್‌ ಕಿಶನ್‌ ಮಾತನಾಡಿದ್ದಾರೆ.

ಮೊದಲ ಎಸೆತದಲ್ಲಿ ಸಿಕ್ಸರ್‌ ಹೊಡೆಯುವುದಾಗಿ ಪಂದ್ಯಕ್ಕೂ ಮುನ್ನವೇ ಎಲ್ಲರಿಗೂ (ಸಹ ಆಟಗಾರರು) ತಿಳಿಸಿದ್ದೆ ಎಂದು ಇಶಾನ್‌ ಕಿಶನ್‌ ಬಹಿರಂಗಪಡಿಸಿದ್ದಾರೆ.

ಏಕದಿನ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ತಾವು ಎದುರಿಸಿದ ಮೊದಲ ಎಸೆತವನ್ನೇ ಸಿಕ್ಸರ್‌ಗಟ್ಟಿದ ಇಶಾನ್ ತಮ್ಮ ಸಾಮರ್ಥ್ಯವನ್ನು ಸಾಬೀತು ಮಾಡಿದ್ದಾರೆ. ಈ ಹಿಂದೆ ಟ್ವೆಂಟಿ-20 ಪದಾರ್ಪಣಾ ಪಂದ್ಯದಲ್ಲಿ ಇಶಾನ್, ಚೊಚ್ಚಲ ಎಸೆತದಲ್ಲಿ ಬೌಂಡರಿ ಗಳಿಸಿದ್ದರು.

ಪದಾರ್ಪಣೆಯ ಏಕದಿನ ಹಾಗೂ ಟ್ವೆಂಟಿ-20 ಪಂದ್ಯಗಳಲ್ಲಿ ಅರ್ಧಶತಕ ಗಳಿಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಎಂಬ ಹಿರಿಮೆಗೂ ಇಶಾನ್‌ ಕಿಶನ್‌ ಪಾತ್ರರಾಗಿದ್ದಾರೆ. ಈ ಹಿಂದೆ ಇಂಗ್ಲೆಂಡ್ ವಿರುದ್ಧ ಚೊಚ್ಚಲ ಟಿ20 ಪಂದ್ಯದಲ್ಲೂ ಇಶಾನ್ ಅರ್ಧಶತಕ ಬಾರಿಸಿದ್ದರು.

ಪದಾರ್ಪಣೆಯ ಏಕದಿನ ಪಂದ್ಯದಲ್ಲಿ ಎರಡನೇ ಅತಿ ವೇಗದ ಅರ್ಧಶತಕ ದಾಖಲಿಸಿದ ಹಿರಿಮೆಗೂ ಇಶಾನ್ ಪಾತ್ರರಾಗಿದ್ದಾರೆ. ಕೇವಲ 33 ಎಸೆತಗಳಲ್ಲಿ ಅರ್ಧಶತಕ ಗಳಿಸಿದ್ದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು