ಬುಧವಾರ, ನವೆಂಬರ್ 25, 2020
19 °C

ಮಹಿಳಾ ಚಾಲೆಂಜರ್ ಟೂರ್ನಿ: ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಸೂಪರ್‌ನೋವಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಾರ್ಜಾ: ಮಹಿಳಾ ಚಾಲೆಂಜ್‌ ಟೂರ್ನಿಯ ಮೂರನೇ ಹಣಾಹಣಿಯಲ್ಲಿ ಟ್ರೇಲ್‌ಬ್ಲೇಜರ್ಸ್‌ ವಿರುದ್ಧ ಟಾಸ್‌ ಗೆದ್ದಿರುವ ಸೂಪರ್‌ನೋವಾ ತಂಡ ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡಿದೆ.

ಬ್ಲೇಜರ್ಸ್‌ ಪಡೆ ತನ್ನ ಮೊದಲ ಪಂದ್ಯದಲ್ಲಿ ವೆಲೋಸಿಟಿ ವಿರುದ್ಧ 9 ವಿಕೆಟ್‌ ಅಂತರದ ಗೆಲುವು ಸಾಧಿಸಿ ಪಾಯಿಂಟ್ಸ್‌ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. ಆದರೆ ಸೂಪರ್‌ನೋವಾಸ್‌ ಸ್ಥಿತಿ ಇದಕ್ಕೆ ಭಿನ್ನವಾಗಿದೆ. ಈ ತಂಡ ತನ್ನ ಮೊದಲ ಪಂದ್ಯದಲ್ಲಿ ವೆಲೋಸಿಟಿ ವಿರುದ್ಧ ಸೋಲು ಕಂಡಿದ್ದು, ಪಾಯಿಂಟ್ಸ್‌ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಹೀಗಾಗಿ ಫೈನಲ್ ತಲುಪಬೇಕಾದರೆ ಇಲ್ಲಿ ಉತ್ತಮ ಅಂತರದ ಗೆಲುವು ಸಾಧಿಸುವುದು ಅನಿವಾರ್ಯವಾಗಿದೆ.

ಈ ಪಂದ್ಯದಲ್ಲಿ ಸೂಪರ್‌ನೋವಾಸ್ ಸೋಲುಕಂಡರೆ, ವೆಲೋಸಿಟಿ ಹಾಗೂ ಬ್ಲೇಜರ್ಸ್‌ ತಂಡಗಳು ನವೆಂಬರ್‌ 9 ರಂದು ಫೈನಲ್‌ನಲ್ಲಿ ಮುಖಾಮುಖಿಯಾಗಲಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು