ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

IND vs AUS: ಟ್ರಾವಿಸ್, ಮಾರ್ನಸ್ ಫಿಫ್ಟಿ; ಡ್ರಾದತ್ತ ಅಹಮದಾಬಾದ್ ಟೆಸ್ಟ್

Last Updated 13 ಮಾರ್ಚ್ 2023, 8:56 IST
ಅಕ್ಷರ ಗಾತ್ರ

ಅಹಮದಾಬಾದ್: ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ಇಲ್ಲಿನ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಬಾರ್ಡರ್-ಗವಾಸ್ಕರ್ ಸರಣಿಯ ನಾಲ್ಕನೇ ಹಾಗೂ ಅಂತಿಮ ಟೆಸ್ಟ್ ಪಂದ್ಯವು ಡ್ರಾದತ್ತ ಮುಖ ಮಾಡಿದೆ.

ಮೊದಲ ಇನಿಂಗ್ಸ್‌ನಲ್ಲಿ 91 ರನ್ ಹಿನ್ನಡೆಯೊಂದಿಗೆ ಬ್ಯಾಟಿಂಗ್ ಮುಂದುವರಿಸಿದ ಆಸ್ಟ್ರೇಲಿಯಾ, ಐದನೇ ದಿನದಾಟದ ಟೀ ವಿರಾಮದ ಹೊತ್ತಿಗೆ ಎರಡನೇ ಇನಿಂಗ್ಸ್‌ನಲ್ಲಿ 64 ಓವರ್‌ಗಳಲ್ಲಿ ಎರಡು ವಿಕೆಟ್ ನಷ್ಟಕ್ಕೆ 158 ರನ್ ಗಳಿಸಿದೆ.

ಈ ಮೂಲಕ 67 ರನ್‌ಗಳ ಮುನ್ನಡೆ ಕಾಯ್ದುಕೊಂಡಿದೆ. ಪಂದ್ಯದ ಮುಕ್ತಾಯಕ್ಕೆ ಇನ್ನೊಂದು ಅವಧಿಯ ಆಟ ಮಾತ್ರ ಬಾಕಿ ಉಳಿದಿದೆ.

ಟ್ರಾವಿಸ್ ಹೆಡ್ (90) ಹಾಗೂ ಮಾರ್ನಸ್ ಲಾಬುಷೇಶ್ (56*) ಆಕರ್ಷಕ ಅರ್ಧಶತಕಗಳ ಸಾಧನೆ ಮಾಡಿದ್ದಾರೆ. ಇವರಿಬ್ಬರು ದ್ವಿತೀಯ ವಿಕೆಟ್‌ಗೆ 139 ರನ್‌ಗಳ ಜೊತೆಯಾಟದಲ್ಲಿ ಭಾಗಿಯಾದರು.

ಕೇವಲ 10 ರನ್ ಅಂತರದಲ್ಲಿ ಹೆಡ್ ಶತಕ ವಂಚಿತರಾದರು. ಭಾರತದ ಪರ ಆರ್. ಅಶ್ವಿನ್ ಹಾಗೂ ಅಕ್ಷರ್ ಪಟೇಲ್ ತಲಾ ಒಂದು ವಿಕೆಟ್ ಕಬಳಿಸಿದರು.

ಆಸ್ಟ್ರೇಲಿಯಾದ 480 ರನ್ನಿಗೆ ಉತ್ತರವಾಗಿ ಭಾರತ ತಂಡವು ಮೊದಲ ಇನಿಂಗ್ಸ್‌ನಲ್ಲಿ, ಮಾಜಿ ನಾಯಕ ವಿರಾಟ್ ಕೊಹ್ಲಿ (186) ಹಾಗೂ ಶುಭಮನ್ ಗಿಲ್ (128) ಶತಕಗಳ ಬೆಂಬಲದಿಂದ 571 ರನ್ ಗಳಿಸಿತು.

ಆಸೀಸ್ ಪರ ಮೊದಲ ಇನಿಂಗ್ಸ್‌ನಲ್ಲಿ ಉಸ್ಮಾನ್ ಖ್ವಾಜಾ (180) ಹಾಗೂ ಕ್ಯಾಮರೂನ್ ಗ್ರೀನ್ (114) ಶತಕ ಗಳಿಸಿದರು. ಭಾರತದ ಪರ ಅಶ್ವಿನ್ ಆರು ವಿಕೆಟ್ ಕಬಳಿಸಿದರು.

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ಭಾರತ ಲಗ್ಗೆ...
ಐಸಿಸಿ ವಿಶ್ವ ಟೆಸ್ಟ್‌ ಚಾಂ‍ಪಿಯನ್‌ ಶಿಪ್‌ನಲ್ಲಿ ಭಾರತ ತಂಡವು ಫೈನಲ್‌ ಪ್ರವೇಶ ಮಾಡಿದೆ. ನ್ಯೂಜಿಲೆಂಡ್‌ ತಂಡವು ಶ್ರೀಲಂಕಾ ವಿರುದ್ಧ ಗೆಲುವು ಸಾಧಿಸಿದ್ದರಿಂದ ಭಾರತ ಫೈನಲ್‌ ಹಾದಿ ಸುಗಮವಾಯಿತು.

ಇದರೊಂದಿಗೆ ವಿಶ್ವ ಟೆಸ್ಟ್‌ ಚಾಂ‍ಪಿಯನ್‌ ಶಿಪ್‌ನಲ್ಲಿ ಸತತ ಎರಡನೇ ಬಾರಿ ಫೈನಲ್‌ ಪ್ರವೇಶಿಸಿದ ಹೆಗ್ಗಳಿಕೆ ಭಾರತದ್ದಾಯ್ತು. ಜೂನ್‌ 7 ರಂದು ಇಂಗ್ಲೆಂಡಿನ ಓವಲ್‌ನಲ್ಲಿ ನಡೆಯಲಿರುವ ಫೈನಲ್‌ ಪಂದ್ಯದಲ್ಲಿ ಭಾರತವು ಆಸ್ಟ್ರೇಲಿಯಾವನ್ನು ಎದುರಿಸಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT