ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಧರ ಕ್ರಿಕೆಟ್ ಟೂರ್ನಿ: ಭಾರತ–ಪಾಕಿಸ್ತಾನ ಫೈನಲ್

Last Updated 18 ಮಾರ್ಚ್ 2022, 4:02 IST
ಅಕ್ಷರ ಗಾತ್ರ

ದುಬೈ: ಭಾರತ ಮತ್ತು ಪಾಕಿಸ್ತಾನ ತಂಡಗಳು ಇಲ್ಲಿ ನಡೆಯುತ್ತಿರುವ ಅಂಧರ ತ್ರಿಕೋನ ಟ್ವೆಂಟಿ20 ಸರಣಿಯ ಫೈನಲ್ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ.

ಗುರುವಾರ ನಡೆದ ಕೊನೆಯ ಲೀಗ್ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ 63 ರನ್‌ಗಳ ಜಯ ಗಳಿಸುವ ಮೂಲಕ ಭಾರತ ಪ್ರಶಸ್ತಿ ಸುತ್ತಿಗೆ ಪ್ರವೇಶಿಸಿತು.ಆರಂಭಿಕ ಬ್ಯಾಟರ್ ಡಿ.ವೆಂಕಟೇಶ್ವರ ರಾವ್ ಅವರ ಅಮೋಘ ಅರ್ಧಶತಕ (91 ಎಸೆತಗಳಲ್ಲಿ 62 ರನ್‌) ಭಾರತದ ಜಯದಲ್ಲಿ ಪ್ರಮುಖ ಪಾತ್ರವಹಿಸಿತು.

ಒಂಬತ್ತು ಬೌಂಡರಿಗಳೊಂದಿಗೆ ಮಿಂಚಿದ ರಾವ್ ಅವರ ಭರ್ಜರಿ ಬ್ಯಾಟಿಂಗ್ ಬಲದಿಂದ ಭಾರತ 2 ವಿಕೆಟ್‌ಗಳಿಗೆ 185 ರನ್ ಗಳಿಸಿತು.ಗುರಿ ಬೆನ್ನತ್ತಿದ ಬಾಂಗ್ಲಾದೇಶಕ್ಕೆ 6 ವಿಕೆಟ್ ಕಳೆದುಕೊಂಡು 122 ರನ್ ಗಳಿಸಲಷ್ಟೇ ಸಾಧ್ಯವಾಯಿತು. ಇದೇ 19ರಂದು ಫೈನಲ್ ಪಂದ್ಯ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT