ನವದೆಹಲಿ: ಇಂಗ್ಲೆಂಡ್ ಮತ್ತು ವೇಲ್ಸ್ ಆತಿಥ್ಯದಲ್ಲಿ ಮುಂದಿನ ಜೂನ್ 12ರಿಂದ ಪ್ರಾರಂಭವಾಗುವ ಐಸಿಸಿ ಮಹಿಳಾ ಟಿ20 ವಿಶ್ವಕಪ್ನ 10ನೇ ಆವೃತ್ತಿಯಲ್ಲಿ ಒಟ್ಟು 12 ತಂಡಗಳು ಪ್ರಶಸ್ತಿಗಾಗಿ ಪೈಪೋಟಿ ನಡೆಸಲಿವೆ. ಭಾರತ ತಂಡವು ಪಾಕಿಸ್ತಾನ ವಿರುದ್ಧ ಅಭಿಯಾನ ಆರಂಭಿಸಲಿದೆ.

ಟೂರ್ನಿಯ ಸಂಪೂರ್ಣ ವೇಳಾಪಟ್ಟಿಯನ್ನು ಮಂಗಳವಾರ ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಪ್ರಕಟಿಸಿದೆ. ಜೂನ್ 12ರಂದು ನಡೆಯುವ ಉದ್ಘಾಟನಾ ಪಂದ್ಯದಲ್ಲಿ ಆತಿಥೇಯ ಇಂಗ್ಲೆಂಡ್ ತಂಡವು ಶ್ರೀಲಂಕಾ ವಿರುದ್ಧ ಸೆಣಸಲಿದೆ. ಜುಲೈ 5ರಂದು ಲಾರ್ಡ್ಸ್ನಲ್ಲಿ ಫೈನಲ್ ಪಂದ್ಯ ನಡೆಯಲಿದೆ ಎಂದು ಐಸಿಸಿ ಸಿಇಒ ಸಂಜೋಗ್ ಗುಪ್ತಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟೂರ್ನಿಯಲ್ಲಿ ಇದೇ ಮೊದಲ ಬಾರಿ 12 ತಂಡಗಳು ಸ್ಪರ್ಧಿಸಲಿದೆ. ಈ ಹಿಂದಿನ ಆವೃತ್ತಿಯಲ್ಲಿ (2024) 10 ತಂಡಗಳು ಸ್ಪರ್ಧಿಸಿದ್ದು, ನ್ಯೂಜಿಲೆಂಡ್ ತಂಡ ಚಾಂಪಿಯನ್ ಆಗಿತ್ತು. ಈ ಬಾರಿ ಜೂನ್ 28ರವರೆಗೆ ಗುಂಪು ಹಂತದ ಪಂದ್ಯಗಳು, 30ರಂದು ಮತ್ತು ಜುಲೈ 2ರಂದು ಸೆಮಿಫೈನಲ್ ಪಂದ್ಯಗಳು ನಿಗದಿಯಾಗಿವೆ.

ನೇಪಾಳದಲ್ಲಿ ಕಳೆದ ತಿಂಗಳು ನಡೆದ ಅರ್ಹತಾ ಸುತ್ತಿನಲ್ಲಿ ಬಾಂಗ್ಲಾದೇಶ, ಐರ್ಲೆಂಡ್, ಸ್ಕಾಟ್ಲೆಂಡ್ ಮತ್ತು ನೆದರ್ಲೆಂಡ್ಸ್ ವಿಶ್ವಕಪ್ ಟೂರ್ನಿಗೆ ಟಿಕೆಟ್ ಕಾಯ್ದಿರಿಸಿದ ಅಂತಿಮ ನಾಲ್ಕು ತಂಡಗಳಾಗಿವೆ.

ಜೂನ್ 14ರಂದು ಭಾರತ ಮತ್ತು ಪಾಕ್ ತಂಡಗಳು ಎಜ್ಬಾಸ್ಟನ್ನಲ್ಲಿ ಮುಖಾಮುಖಿಯಾಗಲಿವೆ. ಭಾರತವು ಗುಂಪು ಹಂತದಲ್ಲಿ ಒಟ್ಟು ನಾಲ್ಕು ಪಂದ್ಯಗಳನ್ನು ಆಡಲಿದೆ.

ಎ ಗುಂಪಿನಲ್ಲಿ ಭಾರತ, ಆಸ್ಟ್ರೇಲಿಯಾ, ಪಾಕಿಸ್ತಾನ, ದಕ್ಷಿಣ ಆಫ್ರಿಕಾ, ಬಾಂಗ್ಲಾದೇಶ ಮತ್ತು ನೆದರ್ಲೆಂಡ್ಸ್ ತಂಡಗಳು ಸ್ಥಾನ ಪಡೆದಿವೆ. ಬಿ ಗುಂಪಿನಲ್ಲಿ ಇಂಗ್ಲೆಂಡ್, ನ್ಯೂಜಿಲೆಂಡ್, ಶ್ರೀಲಂಕಾ, ವೆಸ್ಟ್ ಇಂಡೀಸ್, ಐರ್ಲೆಂಡ್ ಮತ್ತು ಸ್ಕಾಟ್ಲೆಂಡ್ ತಂಡಗಳಿವೆ.

ಡಚ್ ತಂಡವು ಐಸಿಸಿ ಮಹಿಳಾ ಟಿ20 ವಿಶ್ವಕಪ್ನಲ್ಲಿ ತಮ್ಮ ಚೊಚ್ಚಲ ಅವಕಾಶ ಪಡೆದಿದೆ. ಆ ತಂಡವು ಬಾಂಗ್ಲಾದೇಶದ ವಿರುದ್ಧ ತನ್ನ ಅಭಿಯಾನವನ್ನು ಆರಂಭಿಸಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.