ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

10 ತಂಡಗಳ ಐಪಿಎಲ್; ಎರಡು ಹೊಸ ಫ್ರಾಂಚೈಸಿಗಳಿಗಾಗಿ ಮೇನಲ್ಲಿ ಹರಾಜು

Last Updated 14 ಮಾರ್ಚ್ 2021, 2:57 IST
ಅಕ್ಷರ ಗಾತ್ರ

ನವದೆಹಲಿ: ವಿಶ್ವದ ಶ್ರೀಮಂತ ಕ್ರಿಕೆಟ್ ಲೀಗ್ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಇನ್ನೆರಡು ಹೊಸ ತಂಡಗಳ ಸೇರ್ಪಡೆಯಾಗಲಿದ್ದು, ಮೇನಲ್ಲಿ ಹರಾಜು ಪ್ರಕ್ರಿಯೆ ನರವೇರಲಿದೆ.

ಇದರೊಂದಿಗೆ ಮುಂದಿನ ವರ್ಷದಿಂದ ಐಪಿಎಲ್ ಟೂರ್ನಿಯಲ್ಲಿ ಭಾಗವಹಿಸುವ ಒಟ್ಟು ತಂಡಗಳ ಸಂಖ್ಯೆ 10ಕ್ಕೆ ಏರಿಕೆಯಾಗಲಿದೆ.

ಪ್ರಸಕ್ತ ಸಾಲಿನ ಐಪಿಎಲ್ ಏಪ್ರಿಲ್‌ನಲ್ಲಿ ಆರಂಭವಾಗಿ ಮೇನಲ್ಲಿ ಅಂತ್ಯ ಕಾಣಲಿದೆ. ಈ ಬಹುನಿರೀಕ್ಷಿತ ಟೂರ್ನಿಯ ಅಂತಿಮ ಹಂತದಲ್ಲಿ ಹೊಸ ಎರಡು ಫ್ರಾಂಚೈಸಿಗಳ ಹರಾಜು ಪ್ರಕ್ರಿಯೆ ನಡೆಯಲಿದೆ.

ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ, ಕಾರ್ಯದರ್ಶಿ ಜಯ್ ಶಾ ಸೇರಿದಂತೆ ಬಿಸಿಸಿಐ ಉನ್ನತ ಪದಾಧಿಕಾರಿಗಳು, ಶನಿವಾರದಂದು ಐಪಿಎಲ್ ಆಡಳಿತ ಮಂಡಳಿ ಅಂಗೀಕರಿಸಿದ ವಿವಿಧ ನಿರ್ಣಯಗಳ ಬಗ್ಗೆ ಚರ್ಚೆ ನಡೆಸಿದರು.

ಮುಂದಿನ ವರ್ಷದಿಂದ ಐಪಿಎಲ್ 10 ತಂಡಗಳ ಟೂರ್ನಿಯಾಗಿ ಬದಲಾಗಲಿದೆ. ಎರಡು ಹೊಸ ಫ್ರಾಂಚೈಸಿಗಳ ಬಿಡ್ಡಿಂಗ್ ಪ್ರಕ್ರಿಯೆ ಮೇ ತಿಂಗಳೊಳಗೆ ಪೂರ್ಣಗೊಳ್ಳಲಿದೆ ಎಂದು ಬಿಸಿಸಿಐ ಉನ್ನತ ಮೂಲ ತಿಳಿಸಿದೆ.

ತಂಡಗಳನ್ನು ಅಂತಿಮಗೊಳಿಸಿದ ಬಳಿಕ ಅವರು ಕಾರ್ಯಾಚರಣೆಯನ್ನು ಪ್ರಾರಂಭಿಸಬಹುದಾಗಿದೆ. ಇದಕ್ಕೆ ಸಾಕಷ್ಟು ಸಮಯ ತೆಗೆದುಕೊಳ್ಳಬಹುದು ಎಂದು ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT