ಗುರುವಾರ , ಜೂನ್ 30, 2022
27 °C

IPL 2022: ಬೂಮ್ರಾ ದಾಖಲೆ ಮುರಿದ ಯುವ ಸ್ಪೀಡ್ ಸ್ಟಾರ್ ಉಮ್ರಾನ್

ಐಎಎ‌ನ್‌ಎಸ್‌ Updated:

ಅಕ್ಷರ ಗಾತ್ರ : | |

ಮುಂಬೈ: ಜಸ್‌ಪ್ರೀತ್ ಬೂಮ್ರಾ ದಾಖಲೆ ಮುರಿದಿರುವ ಯುವ ಸ್ಪೀಡ್ ಸ್ಟಾರ್ ಉಮ್ರಾನ್ ಮಲಿಕ್, ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್‌ ಟೂರ್ನಿಯ ಆವೃತ್ತಿಯೊಂದರಲ್ಲಿ 20 ವಿಕೆಟ್ ಗಳಿಸಿದ ಅತ್ಯಂತ ಕಿರಿಯ ವೇಗದ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಐಪಿಎಲ್ 2022 ಟೂರ್ನಿಯಲ್ಲಿ ಮಂಗಳವಾರ ನಡೆದ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡವು ಮುಂಬೈ ಇಂಡಿಯನ್ಸ್ ವಿರುದ್ಧ ಮೂರು ರನ್ ಅಂತರದ ರೋಚಕ ಗೆಲುವು ದಾಖಲಿಸಿತ್ತು.

ಈ ಪಂದ್ಯದಲ್ಲಿ ಉಮ್ರಾನ್ ಮೂರು ವಿಕೆಟ್ ಕಬಳಿಸಿದ್ದರು. ಇದರೊಂದಿಗೆ ಹೈದರಾಬಾದ್ ತಂಡವು ಪ್ಲೇ-ಆಫ್ ಪ್ರವೇಶದ ಕನಸನ್ನು ಜೀವಂತವಾಗಿರಿಸಿದೆ.

ಪ್ರಸಕ್ತ ಸಾಲಿನ ಐಪಿಎಲ್‌ನಲ್ಲಿ ಅಮೋಘ ಬೌಲಿಂಗ್ ಮಾಡಿರುವ ಉಮ್ರಾನ್, 22ನೇ ವರ್ಷದಲ್ಲಿ ಈ ಸಾಧನೆ ಮಾಡಿದ್ದಾರೆ.

ಮುಂಬೈ ಇಂಡಿಯನ್ಸ್ ವೇಗಿ ಬೂಮ್ರಾ, 2017ರ ಐಪಿಎಲ್‌ನಲ್ಲಿ 20ಕ್ಕೂ ಹೆಚ್ಚು ವಿಕೆಟ್ ಗಳಿಸಿದ್ದರು. ಅಂದು ಅವರಿಗೆ 23 ವರ್ಷವಾಗಿತ್ತು.

ಪ್ರಸಕ್ತ ಸಾಲಿನಲ್ಲೇ ಐಪಿಎಲ್‌ನಲ್ಲೇ ಜೀವನಶ್ರೇಷ್ಠ ಐದು ವಿಕೆಟ್ ಸಾಧನೆ ಮಾಡಿರುವ ಉಮ್ರಾನ್, ಐಪಿಎಲ್ ಇತಿಹಾಸದಲ್ಲೇ ಎರಡನೇ ಅತಿ ವೇಗದ ಬೌಲಿಂಗ್ (157 kmph) ಸಾಧನೆ ಮಾಡಿದ್ದರು.

ಒಟ್ಟಾರೆಯಾಗಿ ಈ ಬಾರಿ ಆಡಿರುವ 13 ಪಂದ್ಯಗಳಲ್ಲಿ ಒಟ್ಟು 21 ವಿಕೆಟ್ ಗಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು