ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಂಗ್ಲಾದೇಶ ಎದುರಿನ ಟೆಸ್ಟ್ ಸರಣಿ; ಭಾರತ ತಂಡಕ್ಕೆ ಜೈದೇವ್ ಉನದ್ಕತ್

Last Updated 10 ಡಿಸೆಂಬರ್ 2022, 13:20 IST
ಅಕ್ಷರ ಗಾತ್ರ

ನವದೆಹಲಿ: ಅನುಭವಿ ಎಡಗೈ ಮಧ್ಯಮವೇಗಿ ಜೈದೇವ್ ಅವರನ್ನು ಬಾಂಗ್ಲಾದೇಶ ಎದುರಿನ ಟೆಸ್ಟ್ ಸರಣಿಯಲ್ಲಿ ಆಡಲಿರುವ ಭಾರತ ತಂಡಕ್ಕೆ ಆಯ್ಕೆ ಮಾಡಲಾಗಿದೆ.

ಮೊಹಮ್ಮದ್ ಶಮಿ ಕೈಗೆ ಗಾಯವಾಗಿರುವುದರಿಂದ ವಿಶ್ರಾಂತಿ ನೀಡಲಾಗಿದೆ. ಅವರ ಸ್ಥಾನಕ್ಕೆ ಸೌರಾಷ್ಟ್ರದ ಜೈದೇವ್ ಆಯ್ಕೆಯಾಗಿದ್ದಾರೆ. ಈ ಸರಣಿಯಲ್ಲಿ ಎರಡು ಟೆಸ್ಟ್‌ಗಳು ನಡೆಯಲಿವೆ.

31 ವರ್ಷದ ಜೈದೇವ್ 2010ರಲ್ಲಿ ಸೆಂಚುರಿಯನ್‌ನಲ್ಲಿ ದಕ್ಷಿಣ ಆಫ್ರಿಕಾ ಎದುರಿನ ಟೆಸ್ಟ್‌ ಪಂದ್ಯದಲ್ಲಿ ಆಡಿದ್ದರು. ಏಳು ಏಕದಿನ ಮತ್ತು 10 ಟಿ20 ಪಂದ್ಯಗಳಲ್ಲಿ ಅವರು ಭಾರತ ತಂಡವನ್ನು ಪ್ರತಿನಿಧಿಸಿದ್ದಾರೆ. ದೀರ್ಘ ಕಾಲದ ನಂತರ ಅವರಿಗೆ ಮತ್ತೆ ರಾಷ್ಟ್ರೀಯ ತಂಡದಲ್ಲಿ ಆಡುವ ಅವಕಾಶ ಲಭಿಸಿದೆ.

ಈಚೆಗೆ ಮುಕ್ತಾಯವಾದ ವಿಜಯ್ ಹಜಾರೆ ಟ್ರೋಫಿ ಏಕದಿನ ಕ್ರಿಕೆಟ್ ಟೂರ್ನಿಯಲ್ಲಿ ಜೈದೇವ್ ನಾಯಕತ್ವದ ಸೌರಾಷ್ಟ್ರ ತಂಡವು ಚಾಂಪಿಯನ್ ಆಗಿತ್ತು. ಅದರಲ್ಲಿ ಅವರು 10 ಪಂದ್ಯಗಳಿಂದ 19 ವಿಕೆಟ್‌ಗಳನ್ನು ಗಳಿಸಿದ್ದರು.

ಶಮಿ ಅವರಲ್ಲದೇ ರೋಹಿತ್ ಶರ್ಮಾ, ಕುಲದೀಪ್ ಸೇನ್ ಹಾಗೂ ದೀಪಕ್ ಚಾಹರ್ ಕೂಡ ಗಾಯಗೊಂಡಿದ್ದು ಟೆಸ್ಟ್ ಸರಣಿಯಲ್ಲಿ ಆಡುವುದು ಖಚಿತವಾಗಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT