ನವದೆಹಲಿ: ಗಾಯದಿಂದ ಬಳಲುತ್ತಿರುವ ಆಲ್‌ರೌಂಡರ್ ದಿವ್ಯಾಂಶ್ ಜೋಶಿ ಅವರು ಭಾರತದ 19 ವರ್ಷದೊಳಗಿನವರ ವಿಶ್ವಕಪ್ ತಂಡದಿಂದ ಹೊರಬಿದ್ದಿದ್ದಾರೆ.

ದಕ್ಷಿಣ ಆಫ್ರಿಕಾದ ಡರ್ಬನ್‌ನಲ್ಲಿ ನಡೆದಿದ್ದ ಚತುಷ್ಕೋನ ಏಕದಿನ ಕ್ರಿಕೆಟ್ ಸರಣಿಯ ಮೊದಲ ಪಂದ್ಯದ ವೇಳೆ ಫೀಲ್ಡಿಂಗ್ ಮಾಡುವಾಗ ದಿವ್ಯಾಂಶ್ ಅವರ ಬಲ ಭುಜಕ್ಕೆ ಗಾಯವಾಗಿತ್ತು.

ದಿವ್ಯಾಂಶ್ ಅವರ ಬದಲಿಗೆ ಸಿದ್ದೇಶ್ ವೀರ್ ಅವರಿಗೆ ತಂಡದಲ್ಲಿ ಅವಕಾಶ ನೀಡಲಾಗಿದೆ.

ತಂಡ ಇಂತಿದೆ: ಪ್ರಿಯಂ ಗರ್ಗ್ (ನಾಯಕ), ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ದಿವ್ಯಾಂಶ್ ಸಕ್ಸೇನಾ, ಧ್ರುವ ಜುರೆಲ್ (ಉಪ ನಾಯಕ ಮತ್ತು ವಿಕೆಟ್ ಕೀಪರ್), ಶಾಶ್ವತ್ ರಾವತ್, ಸಿದ್ದೇಶ್ ವೀರ್, ಶುಭಾಂಗ್ ಹೆಗ್ಡೆ, ರವಿ ಬಿಷ್ಣೋಯಿ, ಆಕಾಶ್ ಸಿಂಗ್, ಕಾರ್ತಿಕ್ ತ್ಯಾಗಿ, ಅಥರ್ವ ಅಂಕೋಲೆಕರ್, ಕುಮಾರ್ ಕುಶಾಗ್ರ (ವಿಕೆಟ್ ಕೀಪರ್), ಸುಶಾಂತ್ ಮಿಶ್ರಾ ಮತ್ತು ವಿದ್ಯಾಧರ ಪಾಟೀಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.