ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೋಹಿತ್ ಪದಾರ್ಪಣೆಯನ್ನು ನೆನಪಿಸಿಕೊಂಡ ಯುವಿ

Last Updated 5 ಏಪ್ರಿಲ್ 2020, 19:30 IST
ಅಕ್ಷರ ಗಾತ್ರ

ನವದೆಹಲಿ: ಸ್ಪೋಟಕ ಬ್ಯಾಟ್ಸ್‌ಮನ್ ರೋಹಿತ್ ಶರ್ಮಾ ಅವರನ್ನು ಮೊದಲ ಬಾರಿ ನೋಡಿದಾಗ ಪಾಕಿಸ್ತಾನದ ಇಂಜಮಾಮ್ ಉಲ್ ಹಕ್ ಅವರ ಬ್ಯಾಟಿಂಗ್ ನೆನಪಾಗಿತ್ತು ಎಂದು ಹಿರಿಯ ಕ್ರಿಕೆಟಿಗ ಯುವರಾಜ್ ಸಿಂಗ್ ಹೇಳಿದ್ದಾರೆ.

ಯೂಟ್ಯೂಬ್ ಸಂದರ್ಶನದಲ್ಲಿ ಈ ವಿಷಯ ನೆನಪಿಸಿಕೊಂಡಿರುವ ಯುವಿ, ‘ಇಂಜಮಾಮ್ ಬೌಲರ್‌ಗಳ ಎದುರು ಸಾಕಷ್ಟು ಸಮಯ ತೆಗೆದುಕೊಂಡು ಎಸೆತಗಳನ್ನು ಎದುರಿಸುತ್ತಿದ್ದರು. ಅದೇ ರೀತಿ ರೋಹಿತ್ ಕೂಡ ಇದ್ದರು’ ಎಂದರು.

ರೋಹಿತ್ ಅವರು 2007ರ ಜೂನ್‌ನಲ್ಲಿಐರ್ಲೆಂಡ್ ವಿರುದ್ಧ ಏಕದಿನ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದರು. ಅದೇ ವರ್ಷ ನಡೆದಿದ್ದ ಟ್ವೆಂಟಿ–20 ವಿಶ್ವಕಪ್ ಟೂರ್ನಿಯಲ್ಲಿ ಚುಟುಕು ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದರು. ಆ ಸಂದರ್ಭದಲ್ಲಿ ಯುವರಾಜ್ ಸಿಂಗ್ ಅಮೋಘ ಫಾರ್ಮ್‌ನಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT