ಗುವಾಹಟಿ: ಐಪಿಎಲ್ ಲೀಗ್ನ 16 ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ದ ರಾಜಸ್ಥಾನ ರಾಯಲ್ಸ್ ತಂಡದ ಯುವ ಆಟಗಾರ ವೈಭವ್ ಸೂರ್ಯವಂಶಿ ಸ್ಫೋಟಕ ಅರ್ಧಶತಕ ಸಿಡಿಸುವ ಮೂಲಕ ದಾಖಲೆಯೊಂದನ್ನು ಬರೆದಿದ್ದಾರೆ.

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಆರಂಭಿಕ ಆಘಾತವನ್ನು ಎದುರಿಸಿತು. ಪವರ್- ಪ್ಲೇ ಮುಗಿಯುವಷ್ಟರಲ್ಲಿ ಪ್ರಮುಖ 3 ವಿಕೆಟ್ಗಳನ್ನು ಕಳೆದುಕೊಂಡಿತ್ತು. ಈ ವೇಳೆ ನಾಯಕ ರಜತ್ ಪಾಟೀದಾರ್ ಅವರ ಸಂಯಮದ ಆಟದಿಂದ ಆರ್ಸಿಬಿ ತಂಡವು 20 ಓವರ್ನಲ್ಲಿ 201 ರನ್ಗಳ ಗುರಿಯನ್ನು ನೀಡಿತು.

ಗುರಿ ಬೆನ್ನತ್ತಿದ ರಾಜಸ್ಥಾನ ರಾಯಲ್ಸ್ ತಂಡದ ಆರಂಭಿಕ ಬ್ಯಾಟರ್ ವೈಭವ್ ಸೂರ್ಯವಂಶಿ ತಮ್ಮ ಅಬ್ಬರದ ಬ್ಯಾಟಿಂಗ್ ಅನ್ನು ಎಂದಿನಂತೆಯೇ ಮುಂದುವರೆಸಿದರು. 15 ಎಸೆತಗಳಲ್ಲಿ ಅರ್ಧಶತಕವನ್ನು ಪೂರೈಸುವ ಮೂಲಕ ಐಪಿಎಲ್ನಲ್ಲಿ ಭಾರತೀಯ ಆಟಗಾರರು ಸಿಡಿಸಿದ ಅತಿ ವೇಗದ ಅರ್ಧಶತಕದ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.

ಅಲ್ಲದೇ ರಾಜಸ್ಥಾನ ರಾಯಲ್ಸ್ ತಂಡದ ಪರ ಎರಡನೇ ಬಾರಿಗೆ ವೇಗದ ಅರ್ಧಶತಕ ಬಾರಿಸಿದ ದಾಖಲೆ ಮಾಡಿದ್ದಾರೆ. ಇದರ ಜೊತೆಗೆ ರಾಜಸ್ಥಾನ ರಾಯಲ್ಸ್ ತಂಡದ ಪರ ಪವರ್–ಪ್ಲೇನಲ್ಲಿ ಅರ್ಧಶತಕ ಗಳಿಸಿದ್ದ ಜೋಸ್ ಬಟ್ಲರ್ ಅವರ ದಾಖಲೆ ಮುರಿದಿದ್ದಾರೆ.

ಈ ಪಂದ್ಯದಲ್ಲಿ ವೈಭವ್ 26 ಎಸೆತಗಳಲ್ಲಿ 8 ಬೌಂಡರಿ, 7 ಸಿಕ್ಸರ್ ಸಹಿತ 76 ರನ್ ಗಳಿಸಿದರು.

ಐಪಿಎಲ್ನಲ್ಲಿ ಭಾರತೀಯ ಆಟಗಾರರ ವೇಗದ ಅರ್ಧಶತಕ

ಯಶಸ್ವಿ ಜೈಸ್ವಾಲ್ – ಕೋಲ್ಕತ್ತ ನೈಟ್ ರೈಡರ್ಸ್ ವಿರುದ್ಧ, 13 ಎಸೆತಗಳಲ್ಲಿ ಅರ್ಧಶತಕ

ಕೆಎಲ್ ರಾಹುಲ್ – ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ, 14 ಎಸೆತಗಳಲ್ಲಿ ಅರ್ಧಶತಕ

ಯೂಸುಫ್ ಪಠಾಣ್ – ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ, 15 ಎಸೆತಗಳಲ್ಲಿ ಅರ್ಧಶತಕ

ವೈಭವ್ ಸೂರ್ಯವಂಶಿ – ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ, 15 ಎಸೆತಗಳಲ್ಲಿ ಅರ್ಧಶತಕ

ವೈಭವ್ ಸೂರ್ಯವಂಶಿ – ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ, 15 ಎಸೆತಗಳಲ್ಲಿ ಅರ್ಧಶತಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.