ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿರುವ 15 ವರ್ಷದ ಯುವ ಬ್ಯಾಟರ್ ವೈಭವ್ ಸೂರ್ಯವಂಶಿ ಅವರು ಶೀಘ್ರದಲ್ಲೇ ಭಾರತ ತಂಡಕ್ಕೆ ಪದಾರ್ಪಣೆ ಮಾಡಲಿದ್ದಾರೆ ಎಂದು ವರದಿಯಾಗಿದೆ. ವಯಸ್ಸು 15 ಆದರೂ, ತಮ್ಮ ಅಮೋಘ ಆಟದ ಮೂಲಕವೇ ಗಮನಸೆಳೆಯುತ್ತಿರುವ ಅವರು ತಾರಾ ಬೌಲರ್ಗಳ ವಿರುದ್ಧ ಮೇಲುಗೈ ಸಾಧಿಸಿದ್ದಾರೆ.

ಇತ್ತೀಚೆಗೆ ಮುಕ್ತಾಯಗೊಂಡ 19 ವರ್ಷದೊಳಗಿನವರ ಏಕದಿನ ವಿಶ್ವಕಪ್ ಹಾಗೂ ಈಗ ನಡೆಯುತ್ತಿರುವ ಐಪಿಎಲ್ನಲ್ಲಿ ಅಮೋಘ ಪ್ರದರ್ಶನ ನೀಡುತ್ತಿರುವ ಅವರನ್ನು ಇದೇ ವರ್ಷದ ಜೂನ್ನಲ್ಲಿ ನಡೆಯಲಿರುವ ಐರ್ಲೆಂಡ್ ಪ್ರವಾಸದಲ್ಲಿ ಭಾರತ ತಂಡಕ್ಕೆ ಆಯ್ಕೆಯಾಗುವ ಸಾಧ್ಯತೆ ಇದೆ ಎಂದು ವರದಿಯೊಂದು ತಿಳಿಸಿದೆ.

ದೇಶೀಯ ಕ್ರಿಕೆಟ್ನಲ್ಲಿ ಬಿಹಾರವನ್ನು ಪ್ರತಿನಿಧಿಸುವ ಸೂರ್ಯವಂಶಿ, ತಮ್ಮ ನಿರ್ಭೀತ ಬ್ಯಾಟಿಂಗ್ ಮೂಲಕವೇ ಗಮನಸೆಳೆಯುತ್ತಿದ್ದಾರೆ. ಅವರು ಐಪಿಎಲ್ನಲ್ಲಿ ಆಡಿರುವ 5 ಪಂದ್ಯಗಳಲ್ಲಿ 263.16 ರ ಅದ್ಭುತ ಸ್ಟ್ರೈಕ್-ರೇಟ್ನಲ್ಲಿ 200 ರನ್ಗಳನ್ನು ಗಳಿಸಿ ಆರೆಂಜ್ ಕ್ಯಾಪ್ ಕೂಡ ಪಡೆದುಕೊಂಡಿದ್ದಾರೆ. ಮಾತ್ರವಲ್ಲ, ಈಗಾಗಲೆ 2 ಸ್ಫೋಟಕ ಅರ್ಧಶತಕ ಕೂಡ ಸಿಡಿಸಿದ್ದಾರೆ.

‘ಅವರು ಐರ್ಲೆಂಡ್ ಪ್ರವಾಸಕ್ಕೆ ಭಾರತ ತಂಡಕ್ಕೆ ಆಯ್ಕೆಯಾಗುವ ಸಾಧ್ಯತೆ ಇದೆ ಮತ್ತು ಆಯ್ಕೆದಾರರು ಕೂಡ ಅವರ ಹೆಸರನ್ನು ಇತರೆ ಆಟಗಾರರ ಜೊತೆ ಶಾರ್ಟ್ ಲಿಸ್ಟ್ ಮಾಡಿದ್ದಾರೆ’ ಎಂದು ಮೂಲವೊಂದು ತಿಳಿಸಿರುವುದಾಗಿ ಇಂಡಿಯನ್ ಎಕ್ಸ್ಪ್ರೆಸ್ ವರದಿ ಮಾಡಿದೆ.

ಐರ್ಲೆಂಡ್ನಲ್ಲಿ ನಡೆಯಲಿರುವ ಎರಡು ಪಂದ್ಯಗಳ ಟಿ20 ಸರಣಿಗೆ ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಿ, ಎರಡನೇ ಹಂತದ ಭಾರತ ತಂಡವನ್ನು ಕಳಿಸುವ ಸಾಧ್ಯತೆ ಇದೆ.

ಕಳೆದ ವರ್ಷ ಐಪಿಎಲ್ಗೆ ಪದಾರ್ಪಣೆ ಮಾಡಿದ ಸೂರ್ಯವಂಶಿ, ಐಪಿಎಲ್ ವೃತ್ತಿಜೀವನದ ಮೊದಲ ಎಸೆತವನ್ನು ಸಿಕ್ಸರ್ ಬಾರಿಸುವ ಮೂಲಕ ಉತ್ತಮ ಪ್ರದರ್ಶನ ನೀಡಿದ್ದರು. ಮಾತ್ರವಲ್ಲ, ಅದೇ ವರ್ಷ ಗುಜರಾತ್ ಟೈಟಾನ್ಸ್ ವಿರುದ್ಧ ಕೇವಲ 35 ಎಸೆತಗಳಲ್ಲಿ ಶತಕ ಸಿಡಿಸಿ ಮಿಂಚಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.