ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿಯಲ್ಲಿ ನಾಕೌಟ್ ಹಣಾಹಣಿ

Last Updated 2 ಮಾರ್ಚ್ 2021, 4:33 IST
ಅಕ್ಷರ ಗಾತ್ರ

ಬೆಂಗಳೂರು: ವಿಜಯ್ ಹಜಾರೆ ಟ್ರೋಫಿ ಏಕದಿನ ಕ್ರಿಕೆಟ್ ಟೂರ್ನಿಯ ನಾಕೌಟ್ ಹಂತದ ಪಂದ್ಯಗಳು ನವದೆಹಲಿಯಲ್ಲಿ ಆಯೋಜನೆಗೊಳ್ಳಲಿವೆ.

ಮಾರ್ಚ್‌ 7ರಂದು ಎಲಿಮಿನೇಟರ್‌ ಪಂದ್ಯ ನಡೆಯಲಿದೆ. ಕ್ವಾರ್ಟರ್‌ಫೈನಲ್‌ ಅರ್ಹತೆ ಪಡೆಯುವ ಎಂಟನೇ ತಂಡವು ಪ್ಲೇಟ್ ಗುಂಪಿನಲ್ಲಿ ಅಗ್ರಸ್ಥಾನ ಪಡೆಯುವ ತಂಡದೆದುರು ಸೆಣಸಲಿದೆ. ಗೆದ್ದ ಬಳಗವು ಕ್ವಾರ್ಟರ್‌ಫೈನಲ್‌ಗೆ ಪ್ರವೇಶಿಸಲಿದೆ.

ಮಾರ್ಚ್‌ 8 ಮತ್ತು 9ರಂದು ಎರಡನೇ ಕ್ವಾರ್ಟರ್‌ಫೈನಲ್ ಪಂದ್ಯಗಳು ನಡೆಯಲಿವೆ. 11ರಂದು ಸೆಮಿಫೈನಲ್ ಮತ್ತು 14ರಂದು ಫೈನಲ್ ಪಂದ್ಯಗಳು ನಡೆಯಲಿವೆ ಎಂದು ಬಿಸಿಸಿಐ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT