ಶುಕ್ರವಾರ, ಫೆಬ್ರವರಿ 3, 2023
25 °C

ವಿಜಯ್ ಹಜಾರೆ ಟ್ರೋಫಿ ಕ್ರಿಕೆಟ್ ಟೂರ್ನಿ: ಕ್ವಾರ್ಟರ್‌ಫೈನಲ್ ಪ್ರವೇಶಿಸಿದ ಕರ್ನಾಟಕ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಅಹಮದಾಬಾದ್‌: ಜಾರ್ಖಂಡ್‌ ವಿರುದ್ಧ 5 ವಿಕೆಟ್ ಅಂತರದ ಸುಲಭ ಗೆಲುವು ಸಾಧಿಸಿದ ಕರ್ನಾಟಕ ತಂಡ ವಿಜಯ್ ಹಜಾರೆ ಟ್ರೋಫಿ ಏಕದಿನ ಕ್ರಿಕೆಟ್ ಟೂರ್ನಿಯಲ್ಲಿ ಕ್ವಾರ್ಟರ್‌ಫೈನಲ್‌ ಪ್ರವೇಶಿಸಿದೆ.

ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಪ್ರೀಕ್ವಾರ್ಟರ್‌ಫೈನಲ್‌ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಜಾರ್ಖಂಡ್‌ 47.1 ಓವರ್‌ಗಳಲ್ಲೇ 187 ರನ್‌ ಗಳಿಸಿ ಆಲೌಟ್‌ ಆಯಿತು.

ಶಿಸ್ತಿನ ದಾಳಿ ಸಂಘಟಿಸಿದ ವೇಗಿಗಳಾದ ವಿದ್ವತ್ ಕಾವೇರಪ್ಪ, ರೋನಿತ್ ಮೋರೆ ಹಾಗೂ ಎಂ. ವೆಂಕಟೇಶ್ ತಲಾ ಮೂರು ವಿಕೆಟ್‌ಗಳನ್ನು ಉರುಳಿಸಿದರು. ಮನೋಜ್‌ ಭಾಂದಗೆ ಇನ್ನೊಂದು ವಿಕೆಟ್‌ ಪಡೆದರು. ಹೀಗಾಗಿ, ಜಾರ್ಖಂಡ್ ಪಡೆಯನ್ನು ಸಾಧಾರಣ ಮೊತ್ತಕ್ಕೆ ಕಟ್ಟಿ ಹಾಕಲು ಸಾಧ್ಯವಾಯಿತು.

ಈ ಗುರಿ ಬೆನ್ನತ್ತಿದ ಕರ್ನಾಟಕ ತಂಡಕ್ಕೆ ಉತ್ತಮ ಆರಂಭ ಸಿಗಲಿಲ್ಲ. ಆರ್‌.ಸಮರ್ಥ್‌ ಜೊತೆ ಇನಿಂಗ್ಸ್‌ ಆರಂಭಿಸಿದ ನಾಯಕ ಮಯಂಕ್ ಅಗರವಾಲ್‌ ಕೇವಲ 12 ರನ್ ಗಳಿಸಿ ಔಟಾದರು. ಆದರೆ, ಸಮರ್ಥ್‌ (53) ಮತ್ತು ಮೂರನೇ ಕ್ರಮಾಂಕದ ನಿಕಿನ್‌ ಜೋಶ್ (63) ತಲಾ ಅರ್ಧಶತಕ ಸಿಡಿಸಿ ಮಿಂಚಿದರು. ಹೀಗಾಗಿ ಇನ್ನೂ 55 ಎಸೆತಗಳು ಬಾಕಿ ಇರುವಂತೆಯೇ 5 ವಿಕೆಟ್‌ ನಷ್ಟಕ್ಕೆ 188 ರನ್ ಗಳಿಸಿ ಜಯದ ನಗೆ ಬೀರಿತು.

ಕರ್ನಾಟಕ ತಂಡ ನವೆಂಬರ್‌ 28ರಂದು ನಡೆಯುವ ಕ್ವಾರ್ಟರ್‌ಫೈನಲ್‌ ಪಂದ್ಯದಲ್ಲಿ ಪಂಜಾಬ್‌ ವಿರುದ್ಧ ಕಣಕ್ಕಿಳಿಯಲಿದೆ.

ಅದೇ ದಿನ ಮಹಾರಾಷ್ಟ್ರ ವಿರುದ್ಧ ಉತ್ತರ ಪ್ರದೇಶ, ಅಸ್ಸಾಂ ವಿರುದ್ಧ ಜಮ್ಮು ಮತ್ತು ಕಾಶ್ಮೀರ, ತಮಿಳುನಾಡು ವಿರುದ್ಧ ಸೌರಾಷ್ಟ್ರ ಸೆಮಿಫೈನಲ್‌ ಟಿಕೆಟ್‌ಗಾಗಿ ಪೈಪೋಟಿ ನಡೆಸಲಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು