ಶುಕ್ರವಾರ, ಜನವರಿ 28, 2022
26 °C

ವಿಜಯ್ ಹಜಾರೆ ಟ್ರೋಫಿ: ಕರ್ನಾಟಕಕ್ಕೆ ಮನೀಷ್ ಸಾರಥ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಮುಂದಿನ ತಿಂಗಳು ಆರಂಭವಾಗಲಿರುವ ವಿಜಯ್ ಹಜಾರೆ ಟ್ರೋಫಿ ಏಕದಿನ ಕ್ರಿಕೆಟ್ ಟೂರ್ನಿಯಲ್ಲಿ ಕರ್ನಾಟಕ ತಂಡವನ್ನು ಮನೀಷ್ ಪಾಂಡೆ ಮುನ್ನಡೆಸಲಿದ್ದಾರೆ.

ಕರ್ನಾಟಕ ತಂಡವು ಬಿ ಗುಂಪಿನಲ್ಲಿ ಆಡಲಿದೆ. ಇದರಲ್ಲಿ ತಮಿಳುನಾಡು, ಪುದುಚೇರಿ, ಮುಂಬೈ, ಬರೋಡಾ ಮತ್ತು ಬಂಗಾಳ ತಂಡಗಳ ಸವಾಲನ್ನು ಎದುರಿಸಲಿದೆ. ಈಚೆಗೆ ಸೈಯದ್ ಮುಷ್ತಾಕ್ ಅಲಿ ಟಿ20 ಕ್ರಿಕೆಟ್ ಟೂರ್ನಿಯಲ್ಲಿ ಪಾಂಡೆ ಬಳಗವು ರನ್ನರ್ಸ್ ಅಪ್ ಆಗಿತ್ತು.

ಬಿ ಗುಂಪಿನ ಪಂದ್ಯಗಳು ತಿರುವನಂತಪುರದಲ್ಲಿ ನಡೆಯಲಿವೆ. ಕರ್ನಾಟಕವು ಡಿಸೆಂಬರ್ 8ರಂದು ಪುದುಚೇರಿ ವಿರುದ್ಧ ತನ್ನ ಅಭಿಯಾನ ಆರಂಭಿಸಲಿದೆ.

ತಂಡ ಇಂತಿದೆ: ಮನೀಷ್ ಪಾಂಡೆ (ನಾಯಕ), ರೋಹನ್ ಕದಂ, ಆರ್. ಸಮರ್ಥ್ (ಉಪನಾಯಕ), ಕರುಣ್ ನಾಯರ್, ಕೆ.ವಿ. ಸಿದ್ಧಾರ್ಥ್, ಅಭಿನವ್ ಮನೋಹರ್, ಡಿ. ನಿಶ್ಚಲ್, ಬಿ.ಆರ್. ಶರತ್ (ವಿಕೆಟ್‌ಕೀಪರ್), ಶರತ್ ಶ್ರೀನಿವಾಸ್ (ವಿಕೆಟ್‌ಕೀಪರ್), ಜೆ. ಸುಚಿತ್, ಶ್ರೇಯಸ್ ಗೋಪಾಲ್, ಕೆ.ಸಿ. ಕಾರ್ಯಪ್ಪ, ರಿತೇಶ್ ಭಟ್ಕಳ್, ಪವನ್ ದುಬೆ, ವಿದ್ಯಾಧರ್ ಪಾಟೀಲ, ವಿ. ಕೌಶಿಕ್, ಪ್ರತೀಕ್ ಜೈನ್, ಎಂ. ಬಿ. ದರ್ಶನ್, ವಿಜಯಕುಮಾರ್ ವೈಶಾಖ, ಎಂ. ವೆಂಕಟೇಶ್.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು