ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇರಳದಲ್ಲಿ ನಿಫಾ ವೈರಾಣು: ಮೃತರ ಸಂಖ್ಯೆ 10ಕ್ಕೆ ಏರಿಕೆ

Last Updated 22 ಮೇ 2018, 9:51 IST
ಅಕ್ಷರ ಗಾತ್ರ

ಕೋಯಿಕ್ಕೋಡ್ (ಕೇರಳ): ಕೇರಳ ರಾಜ್ಯದಲ್ಲಿ ನಿಫಾ ವೈರಾಣು ಸೋಂಕಿಗೆ ಬಲಿಯಾದವರ ಸಂಖ್ಯೆ 10ಕ್ಕೆ ಏರಿದೆ. ಇನ್ನೂ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಆರೋಗ್ಯ ಸಚಿವಾಲಯ ಖಚಿತಪಡಿಸಿದೆ.

ರಾಜನ್‌ ಮತ್ತು ಅಶೋಕನ್‌ ಎಂಬ ಇಬ್ಬರು ವ್ಯಕ್ತಿಗಳು ಇಂದು ಬಳಿಗ್ಗೆ ಮೃತಪಟ್ಟಿದ್ದಾರೆ. ಉತ್ತರ ಕೇರಳದ ಕೋಯಿಕ್ಕೋಡ್‌ ಮತ್ತು ಮಲಪ್ಪುರಂ ಜಿಲ್ಲೆಯಲ್ಲಿ ವೈರಾಣುವಿಗೆ ಬಲಿಯಾಗಿದ್ದಾರೆ. ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಆರೋಗ್ಯ ಸಚಿವೆ ಕೆ.ಕೆ. ಶೈಲಜಾ ಮಂಗಳವಾರ ತಿಳಿಸಿದರು.

ಈ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಕಟ್ಟೆಚ್ಚರ ಘೋಷಿಸಲಾಗಿದ್ದು, ಸೊಂಕು ಪತ್ತೆಯಾದವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅವರು ತಿಳಿಸಿದರು.

ವೈರಸ್‌ ಹರಡಿರುವ ಸಂಬಂಧ ವಿಶ್ವ ಆರೋಗ್ಯ ಸಂಸ್ಥೆ(ಡಬ್ಲ್ಯುಎಚ್‌ಒ)ಗೆ ತಿಳಿಸಲಾಗಿದೆ ಎಂದು ಅವರು ಸುದ್ದಿಗಾರರಿಗೆ ಮಾಹಿತಿ  ನೀಡಿದರು.

ಪ್ರಯೋಗಾಲಯ ಪರೀಕ್ಷೆಗಾಗಿ ಕಳುಹಿಸಲಾಗಿದ್ದ 18 ಮಾದರಿಗಳಲ್ಲಿ 12ರಲ್ಲಿ ವೈರಾಣು ಇರುವುದು ಪತ್ತೆಯಾಗಿದೆ, ಅದರಲ್ಲಿ 10 ಮೃತಪಟ್ಟಿದ್ದಾರೆ ಎಂದು ಅವರು ವಿವರ ನೀಡಿದರು.

* ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT