ಬೆಂಗಳೂರು: ಬ್ಯಾಟಿಂಗ್ ಚಾಂಪಿಯನ್ ವಿರಾಟ್ ಕೊಹ್ಲಿ ಅವರು ಮಂಗಳವಾರ ನಡೆಯಲಿರುವ ವಿಜಯ್ ಹಜಾರೆ ಟ್ರೋಫಿ ಏಕದಿನ ಕ್ರಿಕೆಟ್ ಟೂರ್ನಿಯ ಡಿ ಗುಂಪಿನ ಪಂದ್ಯದಲ್ಲಿ ಆಡುತ್ತಿಲ್ಲ.

ಬಿಸಿಸಿಐ ಶ್ರೇಷ್ಠತಾ ಕೇಂದ್ರದಲ್ಲಿ ಹೋದ ತಿಂಗಳು ನಡೆದಿದ್ದ ಟೂರ್ನಿಯ ಮೊದಲೆರಡು ಪಂದ್ಯಗಳಲ್ಲಿ ವಿರಾಟ್ ಆಡಿದ್ದರು. ಕ್ರಮವಾಗಿ 131 ಮತ್ತು 77 ರನ್ ಗಳಿಸಿದ್ದರು. ಅದರ ಫಲವಾಗಿ ದೆಹಲಿ ತಂಡವು ಎರಡೂ ಪಂದ್ಯಗಳಲ್ಲಿ ಜಯಿಸಿತ್ತು. ನಂತರದ ಎರಡು ಪಂದ್ಯಗಳಲ್ಲಿ ಅವರು ಆಡಿರಲಿಲ್ಲ. ಭಾರತ ತಂಡದ ಆಟಗಾರರು ಬಿಡುವು ಇದ್ದಾಗ ದೇಶಿ ಕ್ರಿಕೆಟ್ ಟೂರ್ನಿಯಲ್ಲಿ ಕನಿಷ್ಠ ಎರಡು ಪಂದ್ಯಗಳನ್ನು ಆಡಬೇಕು ಎಂಬ ನಿಯಮದನ್ವಯ ಅವರು ಆಡಿದ್ದರು.

ಮಂಗಳವಾರ ರೈಲ್ವೆಸ್ ಎದುರು ನಡೆಯುವ ಪಂದ್ಯದಲ್ಲಿ ಅವರು ಆಡಲಿದ್ದಾರೆ ಎಂದು ದೆಹಲಿ ಡಿಸ್ಟ್ರಿಕ್ಟ್ಸ್ ಕ್ರಿಕೆಟ್ ಸಂಸ್ಥೆಯು ಈಚೆಗೆ ತಿಳಿಸಿತ್ತು.

‘ರೈಲ್ವೆಸ್ ಎದುರಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅವರು ಆಡುವುದಿಲ್ಲ’ ಎಂದು ದೆಹಲಿ ತಂಡದ ಮುಖ್ಯ ಕೋಚ್ ಸರಣದೀಪ್ ಸಿಂಗ್ ಪಿಟಿಐ ಸುದ್ದಿಸಂಸ್ಥೆಗೆ ಸೋಮವಾರ ತಿಳಿಸಿದ್ದಾರೆ.

ಈ ಪಂದ್ಯದಲ್ಲಿ ಭಾರತ ತಂಡದ ವಿಕೆಟ್ಕೀಪರ್ ರಿಷಭ್ ಪಂತ್ ಮತ್ತು ಬೌಲರ್ ಹರ್ಷಿತ್ ರಾಣಾ ಅವರು ಕಣಕ್ಕಿಳಿಯುವುದು ಖಚಿತ.

ಇದೇ 11ರಿಂದ ಆರಂಭವಾಗುವ ನ್ಯೂಜಿಲೆಂಡ್ ಎದುರಿನ ಮೂರು ಏಕದಿನ ಪಂದ್ಯಗಳ ಸರಣಿಯಲ್ಲಿ ವಿರಾಟ್ ಆಡಲಿದ್ದಾರೆ.

ದೆಹಲಿ ತಂಡವು ಒಟ್ಟು 16 ಅಂಕಗಳೊಂದಿಗೆ ಡಿ ಗುಂಪಿನ ಅಗ್ರಸ್ಥಾನದಲ್ಲಿದೆ. ಲೀಗ್ ಹಂತದಲ್ಲಿ ಇನ್ನೆರಡು ಪಂದ್ಯಗಳು ಬಾಕಿ ಇವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.