ಬೆಂಗಳೂರು: ಕರ್ನಾಟಕ ಕ್ರಿಕೆಟ್ ತಂಡದ ಮಾಜಿ ಆಲ್ರೌಂಡರ್ ಬಿ. ವಿಜಯಕೃಷ್ಣ (71) ಗುರುವಾರ ಬೆಳಗಿನ ಜಾವ ನಿಧನರಾದರು. ಬಹು ಅಂಗಾಂಗಗಳ ವೈಫಲ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಎಡಗೈ ಸ್ಪಿನ್ನರ್ ಮತ್ತು ಬ್ಯಾಟ್ಸ್ಮನ್ ಆಗಿದ್ದ ವಿಜಯಕೃಷ್ಣ ಅವರು 1968 ರಿಂದ 1984ರವರೆಗೆ ಕರ್ನಾಟಕ ತಂಡದಲ್ಲಿ ಆಡಿದ್ದರು. 80 ಪ್ರಥಮ ದರ್ಜೆ ಪಂದ್ಯಗಳಲ್ಲಿ ಆಡಿದ್ದ ವಿಜಯಕೃಷ್ಣ 2297 ರನ್ಗಳನ್ನು ಗಳಿಸಿದ್ಧಾರೆ. ಅದರಲ್ಲಿ ಎರಡು ಶತಕಗಳಿವೆ. 194 ವಿಕೆಟ್ಗಳನ್ನೂ ಗಳಿಸಿದ್ದಾರೆ.

ಇ.ಎ.ಎಸ್. ಪ್ರಸನ್ನ, ಬಿ.ಎಸ್. ಚಂದ್ರಶೇಖರ್, ಜಿ.ಆರ್. ವಿಶ್ವನಾಥ್, ಬ್ರಿಜೇಶ್ ಪಟೇಲ್ ಅವರ ಸಮಕಾಲೀನ ಆಟಗಾರರಾಗಿದ್ದ ವಿಜಯಕೃಷ್ಣ, ಕರ್ನಾಟಕ ತಂಡವು 1973–74ರಲ್ಲಿ ಮೊದಲ ಸಲ ರಣಜಿ ಟ್ರೋಫಿ ಜಯಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ವಿಜಯ್ ಕೃಷ್ಣ ಬೆಂಗಳೂರಿನ ಕುಮಾರ ಪಾರ್ಕ್ನಲ್ಲಿ ವಾಸಿಸುತ್ತಿದ್ದರು.ಮೃತರ ಅಂತ್ಯಕ್ರಿಯೆಯು ಗುರುವಾರ ಸಂಜೆ 4 ಗಂಟೆಗೆ ಹೆಬ್ಬಾಳದ ಚಿತಾಗಾರದಲ್ಲಿ ನೆರವೇರಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.