ಶುಕ್ರವಾರ, ಏಪ್ರಿಲ್ 10, 2020
19 °C

ಇನ್‌ಸ್ಟಾಗ್ರಾಂನಲ್ಲಿ 5 ಕೋಟಿ ಹಿಂಬಾಲಕರನ್ನು ಹೊಂದಿದ ಮೊದಲ ಭಾರತೀಯ ಕೊಹ್ಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್‌ ಕೊಹ್ಲಿ ಅವರನ್ನು ಇನ್‌ಸ್ಟಾಗ್ರಾಂನಲ್ಲಿ ಹಿಂಬಾಲಿಸುವವರ ಸಂಖ್ಯೆ ಬರೋಬ್ಬರಿ 5 ಕೋಟಿ ದಾಟಿದೆ. ಆ ಮೂಲಕ ಕೊಹ್ಲಿ, ಇಷ್ಟು ಸಂಖ್ಯೆಯ ಫಾಲೋವರ್ಸ್‌ಗಳನ್ನು ಹೊಂದಿದ ಮೊದಲ ಭಾರತೀಯ ಎನಿಸಿದ್ದಾರೆ.

ಇದುವರೆಗೆ ಒಟ್ಟು 931 ಫೋಸ್ಟ್‌ಗಳನ್ನು ಪ್ರಕಟಿಸಿರುವ ಕೊಹ್ಲಿ, 148 ಜನರನ್ನು ಹಿಂಬಾಲಿಸುತ್ತಿದ್ದಾರೆ.

ಬಾಲಿವುಡ್‌ ನಟಿ ಪ್ರಿಯಾಂಕ ಚೋಪ್ರಾ ಅವರಿಗೆ 4 ಕೋಟಿ 99 ಲಕ್ಷಕ್ಕೂ ಹೆಚ್ಚು ಹಿಂಬಾಲಕರಿದ್ದು, ಭಾರತೀಯರ ಪೈಕಿ ಎರಡನೇ ಸ್ಥಾನದಲ್ಲಿದ್ದಾರೆ. ದೀಪಿಕಾ ಪಡುಕೋಣೆ ಮೂರನೇ ಸ್ಥಾನದಲ್ಲಿದ್ದು, ಅವರಿಗೆ 4.41 ಕೋಟಿ ಹಿಂಬಾಲಕರಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರನ್ನು 3.4 ಕೋಟಿ ಜನರು ಹಿಂಬಾಲಿಸುತ್ತಿದ್ದಾರೆ.

ಒಟ್ಟಾರೆ ಅತಿಹೆಚ್ಚು ಹಿಂಬಾಲಕರು ಇರುವುದು ಫುಟ್‌ಬಾಲ್ ದಿಗ್ಗಜ ಕ್ರಿಸ್ಟಿಯಾನೊ ರೊನಾಲ್ಡೊ ಅವರಿಗೆ. ಅವರನ್ನು 20 ಕೋಟಿಗೂ ಹೆಚ್ಚು ಜನರು ಹಿಂಬಾಲಿಸುತ್ತಿದ್ದಾರೆ. ಅಮೆರಿಕದ ಗಾಯಕಿ ಎರಿಯಾನ ಗ್ರಾಂಡೆ (17.5 ಕೋಟಿ) ನಂತರದ ಸ್ಥಾನದಲ್ಲಿದ್ದಾರೆ.

ಇದನ್ನೂ ಓದಿ: ಇನ್‌ಸ್ಟಾಗ್ರಾಂ ಮೂಲಕ ರೊನಾಲ್ಡೊ ಪಡೆಯುವ ವಾರ್ಷಿಕ ಆದಾಯ ₹ 378 ಕೋಟಿ!

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು