ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಹ್ಲಿ-ಅನುಷ್ಕಾ ದಂಪತಿಗೆ ಗಂಡು ಮಗು ಜನನ; ಊಹಾಪೋಹಗಳಿಗೆ ತೆರೆ

Published 20 ಫೆಬ್ರುವರಿ 2024, 15:58 IST
Last Updated 20 ಫೆಬ್ರುವರಿ 2024, 15:58 IST
ಅಕ್ಷರ ಗಾತ್ರ

ಬೆಂಗಳೂರು: ಭಾರತೀಯ ಕ್ರಿಕೆಟಿಗ ವಿರಾಟ್ ಕೊಹ್ಲಿ ಹಾಗೂ ನಟಿ ಅನುಷ್ಕಾ ಶರ್ಮಾ ದಂಪತಿಗೆ ಗಂಡು ಮಗು ಜನಿಸಿದೆ.

ಈ ವಿವರವನ್ನು ಸ್ವತಃ ವಿರಾಟ್ ಕೊಹ್ಲಿ ಅವರೇ ಸಾಮಾಜಿಕ ಮಾಧ್ಯಮಗಳ ಮೂಲಕ ಬಹಿರಂಗಪಡಿಸಿದ್ದಾರೆ. ಅಲ್ಲದೆ ಎರಡನೇ ಮಗುವಿನ ಆಗಮನದ ಖುಷಿಯ ವಿಚಾರವನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ.

'ನಮ್ಮ ಹೃದಯ ಅತೀವ ಸಂತೋಷ ಹಾಗೂ ಪ್ರೀತಿಯಿಂದ ತುಂಬಿದೆ. ಫೆಬ್ರುವರಿ 15ರಂದು ನಾವು ವಮಿಕಾ ಅವರ ತಮ್ಮ 'ಅಕಾಯ್'ರನ್ನು (Akaay) ಈ ಜಗತ್ತಿಗೆ ಸ್ವಾಗತಿಸಿದ್ದೇವೆ ಎಂದು ತಿಳಿಸಲು ತುಂಬಾನೇ ಸಂತೋಷವಾಗುತ್ತಿದೆ. ನಮ್ಮ ಜೀವನದ ಈ ಸುಂದರ ಸಮಯದಲ್ಲಿ ನಿಮ್ಮೆಲ್ಲರ ಆಶೀರ್ವಾದ ಹಾಗೂ ಶುಭ ಹಾರೈಕೆಗಳನ್ನು ಬಯಸುತ್ತೇವೆ. ಅದೇ ವೇಳೆ ನಮ್ಮ ಗೋಪ್ಯತೆಯನ್ನು ಗೌರವಿಸಲು ವಿನಂತಿಸುತ್ತೇವೆ' ಎಂದು ವಿರಾಟ್ ಕೊಹ್ಲಿ ಬರೆದುಕೊಂಡಿದ್ದಾರೆ.

ವೈಯಕ್ತಿಕ ಕಾರಣದಿಂದಾಗಿ ಪ್ರಸಕ್ತ ಇಂಗ್ಲೆಂಡ್ ವಿರುದ್ಧ ಸಾಗುತ್ತಿರುವ ಐದು ಪಂದ್ಯಗಳ ಟೆಸ್ಟ್ ಸರಣಿಯಿಂದ ವಿರಾಟ್ ಕೊಹ್ಲಿ ಹೊರಗುಳಿದಿದ್ದಾರೆ. ಇದು ಹಲವಾರು ವಂದತಿಗಳಿಗೆ ಎಡೆಮಾಡಿಕೊಟ್ಟಿತ್ತು. ಈಗ ಈ ಎಲ್ಲ ಊಹಾಪೋಹಗಳಿಗೆ ವಿರಾಟ್ ಕೊಹ್ಲಿ ತೆರೆ ಎಳೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT