ಬುಧವಾರ, ಸೆಪ್ಟೆಂಬರ್ 28, 2022
26 °C

ಏಷ್ಯಾ ಕಪ್‌ ಕ್ರಿಕೆಟ್‌ ಟೂರ್ನಿ: ತಂಡಕ್ಕೆ ಮರಳಿದ ಕೊಹ್ಲಿ, ರಾಹುಲ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಮಾಜಿ ನಾಯಕ ವಿರಾಟ್‌ ಕೊಹ್ಲಿ ಮತ್ತು ಗಾಯದಿಂದ ಚೇತರಿಸಿಕೊಂಡಿರುವ ಕೆ.ಎಲ್‌.ರಾಹುಲ್‌ ಅವರು ಏಷ್ಯಾ ಕಪ್‌ ಕ್ರಿಕೆಟ್‌ ಟೂರ್ನಿಯಲ್ಲಿ ಪಾಲ್ಗೊಳ್ಳುವ ಭಾರತ ತಂಡಕ್ಕೆ ಮರಳಿದ್ದಾರೆ.

ರೋಹಿತ್‌ ಶರ್ಮಾ ನಾಯಕತ್ವದ 15 ಸದಸ್ಯರ ಭಾರತ ತಂಡವನ್ನು ಸೋಮವಾರ ಪ್ರಕಟಿಸಲಾಗಿದ್ದು, ವೇಗದ ಬೌಲರ್‌ ಜಸ್‌ಪ್ರೀತ್‌ ಬೂಮ್ರಾ ಅವರು ಬೆನ್ನು ನೋವಿನ ಕಾರಣ ಟೂರ್ನಿಯಲ್ಲಿ ಆಡದಿರಲು ನಿರ್ಧರಿಸಿದ್ದಾರೆ.

ವೆಸ್ಟ್‌ ಇಂಡೀಸ್ ಪ್ರವಾಸದಲ್ಲಿ ತಂಡದಲ್ಲಿದ್ದ ಬ್ಯಾಟರ್‌ ಶ್ರೇಯಸ್‌ ಅಯ್ಯರ್‌, ಎಡಗೈ ಸ್ಪಿನ್ನರ್‌ ಅಕ್ಷರ್ ಪಟೇಲ್, ವೇಗಿ ದೀಪಕ್‌ ಚಾಹರ್‌ ಅವರನ್ನು ಕೈಬಿಡಲಾಗಿದೆ.

ತಂಡ ಹೀಗಿದೆ: ರೋಹಿತ್‌ ಶರ್ಮಾ (ನಾಯಕ), ಕೆ.ಎಲ್‌.ರಾಹುಲ್‌ (ಉಪನಾಯಕ), ವಿರಾಟ್‌ ಕೊಹ್ಲಿ, ಸೂರ್ಯಕುಮಾರ್‌ ಯಾದವ್, ದೀಪಕ್‌ ಹೂಡಾ, ರಿಷಭ್‌ ಪಂತ್ (ವಿಕೆಟ್‌ ಕೀಪರ್), ದಿನೇಶ್‌ ಕಾರ್ತಿಕ್‌ (ವಿಕೆಟ್‌ ಕೀಪರ್), ಹಾರ್ದಿಕ್‌ ಪಾಂಡ್ಯ, ರವೀಂದ್ರ ಜಡೇಜ, ಆರ್‌.ಅಶ್ವಿನ್, ಯಜುವೇಂದ್ರ ಚಾಹಲ್, ರವಿ ಬಿಷ್ಣೋಯಿ, ಭುವನೇಶ್ವರ್‌ ಕುಮಾರ್, ಅರ್ಶದೀಪ್‌ ಸಿಂಗ್, ಆವೇಶ್‌ ಖಾನ್

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು