ಭಾನುವಾರ, ಮೇ 29, 2022
31 °C

ಕ್ಯಾಮೆರಾ ಕಣ್ಣಿಗೆ ಸೆರೆ ಸಿಕ್ಕ ವಮಿಕಾ; ನಿಲುವಲ್ಲಿ ಬದಲಾವಣೆಯಿಲ್ಲ ಎಂದ ಕೊಹ್ಲಿ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಕೇಪ್‌ಟೌನ್: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಹಾಗೂ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ದಂಪತಿಯ ಮಗಳು ವಮಿಕಾ, ಮೊದಲ ಬಾರಿಗೆ ಕ್ಯಾಮೆರಾ ಕಣ್ಣಿಗೆ ಸೆರೆ ಸಿಕ್ಕಿದ್ದಾಳೆ.

ದಕ್ಷಿಣ ಆಫ್ರಿಕಾ ವಿರುದ್ಧ ನ್ಯೂಲ್ಯಾಂಡ್ಸ್ ಮೈದಾನದಲ್ಲಿ ನಡೆದ ಅಂತಿಮ ಏಕದಿನ ಪಂದ್ಯದಲ್ಲಿ ಭಾರತದ ಇನ್ನಿಂಗ್ಸ್ ವೇಳೆಯಲ್ಲಿ ವಿರಾಟ್ ಕೊಹ್ಲಿ ಬ್ಯಾಟಿಂಗ್ ಮಾಡುತ್ತಿದ್ದಾಗ ಮಗಳು ಗ್ಯಾಲರಿಯಲ್ಲಿ ಕಾಣಿಸಿಕೊಂಡಿದ್ದಳು.

ಇದನ್ನೂ ಓದಿ: 

ವಿರಾಟ್ ಕೊಹ್ಲಿ ಅರ್ಧಶತಕವನ್ನು ಪೂರ್ಣಗೊಳಿಸಿದಾಗ ಗ್ಯಾಲರಿಯಲ್ಲಿ ಕಾಣಿಸಿಕೊಂಡ ಅನುಷ್ಕಾ, ಮಗಳನ್ನು ಎತ್ತಿಕೊಂಡಿದ್ದರು. ಈ ವೇಳೆ ವಿರಾಟ್ ಕೊಹ್ಲಿ ಜೋಗುಳ ಹಾಡುವ ರೀತಿಯಲ್ಲಿ ಸಂಭ್ರಮಾಚರಣೆ ಮಾಡಿದ್ದರು.

ಕ್ರಿಕೆಟ್ ನೇರ ಪ್ರಸಾರದಲ್ಲಿ ಈ ದೃಶ್ಯಗಳು ಸೆರೆಯಾಗಿತ್ತು. ಕೆಲವೇ ಹೊತ್ತಿನಲ್ಲಿ ವಮಿಕಾ ಚಿತ್ರ ವೈರಲ್ ಆಗಿತ್ತು. ಅಭಿಮಾನಿಗಳು ವಿವಿಧ ಸಾಮಾಜಿಕ ಮಾಧ್ಯಮಗಳಲ್ಲಿ ಚಿತ್ರವನ್ನು ಹಂಚಿಕೊಂಡಿದ್ದರು.

ಈ ವಿಷಯ ಗಮನಕ್ಕೆ ಬಂದ ಬಳಿಕ ಪ್ರತಿಕ್ರಿಯೆ ನೀಡಿರುವ ವಿರಾಟ್, 'ಸ್ನೇಹಿತರೆ, ನಿನ್ನೆ ಮಗಳ ಚಿತ್ರಗಳನ್ನು ಕ್ರೀಡಾಂಗಣದಲ್ಲಿ ಸೆರೆಹಿಡಿಯಲಾಗಿದ್ದು, ಬಳಿಕ ವ್ಯಾಪಕವಾಗಿ ಹಂಚಿಕೊಳ್ಳಲಾಗಿದೆ ಎಂಬುದು ತಿಳಿದು ಬಂದಿದೆ. ಕ್ಯಾಮೆರಾ ಕಣ್ಣುಗಳು ನಮ್ಮ ಮೇಲಿದ್ದವು ಎಂಬ ವಿಚಾರ ತಿಳಿದಿರಲಿಲ್ಲ. ಆದರೂ ಈ ವಿಚಾರದಲ್ಲಿ ನಮ್ಮ ನಿಲುವು ಹಾಗೂ ಕೋರಿಕೆಯಲ್ಲಿ ಬದಲಾವಣೆಯಿಲ್ಲ. ನಾವು ಈ ಹಿಂದೆ ತಿಳಿಸಿದ ಕಾರಣಗಳಿಗಾಗಿ ವಮಿಕಾ ಅವರ ಚಿತ್ರಗಳನ್ನು ಸೆರೆಹಿಡಿಯದಂತೆ/ಪ್ರಕಟಿಸದಂತೆ ವಿನಂತಿಸುತ್ತೇವೆ' ಎಂದು ಹೇಳಿದ್ದಾರೆ.

ಈ ಹಿಂದೆಯೂ ಮಗಳ ಖಾಸಗಿತನವನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಚಿತ್ರವನ್ನು ಸೆರೆಹಿಡಿದು ಹಂಚದಂತೆ ಮಾಧ್ಯಮ ಸೇರಿದಂತೆ ಅಭಿಮಾನಿಗಳಲ್ಲಿ ವಿರುಷ್ಕಾ ದಂಪತಿ ವಿನಂತಿ ಮಾಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು