ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

IPL: ಟಿ20 ಕ್ರಿಕೆಟ್‌ನಲ್ಲಿ 12,000 ರನ್ ಪೂರೈಸಿದ ಮೊದಲ ಭಾರತೀಯ: ಕೊಹ್ಲಿ ದಾಖಲೆ

Published 22 ಮಾರ್ಚ್ 2024, 16:59 IST
Last Updated 22 ಮಾರ್ಚ್ 2024, 16:59 IST
ಅಕ್ಷರ ಗಾತ್ರ

ಚೆನ್ನೈ: ಇಲ್ಲಿನ ಎಂ.ಎ. ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ(21) ಹೊಸ ಮೈಲುಗಲ್ಲೊಂದನ್ನು ಸ್ಥಾಪಿಸಿದ್ದಾರೆ.

ಟಿ–20 ಕ್ರಿಕೆಟ್‌ನಲ್ಲಿ 12,000 ರನ್ ಗಳಿಕೆಯ ಮಹತ್ವದ ಘಟ್ಟ ತಲು‍ಪಿದ ಭಾರತದ ಮೊದಲ ಬ್ಯಾಟರ್ ಎಂಬ ಖ್ಯಾತಿಗೆ ಅವರು ಪಾತ್ರರಾಗಿದ್ದಾರೆ.

ೊಟ್ಟಾರೆ ವಿಶ್ವ ಕ್ರಿಕೆಟ್‌ನಲ್ಲಿ ಈ ಸಾಧನೆ ಮಾಡಿದ ಕ್ರಿಸ್ ಗೇಲ್, ಶೋಯಿಬ್ ಮಲಿಕ್, ಕಿರೋನ್ ಪೊಲಾರ್ಡ್, ಅಲೆಕ್ಸ್ ಹೇಲ್ಸ್ ಮತ್ತು ಡೇವಿಡ್ ವಾರ್ನರ್ ನಂತರದ 6ನೇ ಸ್ಥಾನದಲ್ಲಿ ಕೊಹ್ಲಿ ಇದ್ದಾರೆ.

ಚೆನ್ನೈ ವಿರುದ್ಧದ ಪಂದ್ಯದ 7ನೇ ಓವರ್‌ನಲ್ಲಿ ಸಿಂಗಲ್ ಪಡೆಯುವ ಮೂಲಕ ಕೊಹ್ಲಿ ಈ ಸಾಧನೆ ಮಾಡಿದ್ದಾರೆ.

ಕೊಹ್ಲಿ ಗಳಿಸಿರುವ 12,000 ರನ್‌ಗಳಲ್ಲಿ ಅವರು ಆರ್‌ಸಿಬಿ ಪರ ಐಪಿಎಲ್‌ನಲ್ಲಿ ಮತ್ತು ಚಾಂಪಿಯನ್ಸ್ ಲೀಗ್ ಹಾಗೂ ಟಿ20 ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ಭಾರತದ ಪರ ಗಳಿಸಿದ ರನ್ ಸಹ ಸೇರಿದೆ.

426 ಪಂದ್ಯಗಳಲ್ಲಿ 11,156 ರನ್ ಗಳಿಸಿರುವ ರೋಹಿತ್ ಶರ್ಮಾ, 329 ಪಂದ್ಯಗಳಲ್ಲಿ 9,645 ರನ್ ಗಳಿಸಿರುವ ಶಿಖರ್ ಧವನ್ ನಂತರದ ಸ್ಥಾನದಲ್ಲಿದ್ದಾರೆ.

ಇದೇವೇಳೆ, ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 1,000 ರನ್ ಗಳಿಸಿದ ದಾಖಲೆಯನ್ನು ಕೊಹ್ಲಿ ಬರೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT