ಗುರುವಾರ , ಮಾರ್ಚ್ 30, 2023
23 °C

33ನೇ ವಸಂತಕ್ಕೆ ಕಾಲಿಟ್ಟ ಕಿಂಗ್‌ ಕೊಹ್ಲಿ: ಟ್ವಿಟರ್‌ನಲ್ಲಿ ಶುಭಾಶಯಗಳ ಮಹಾಪೂರ

ಪ್ರಜಾವಾಣಿ ವೆಬ್‌ ಡೆಸ್ಕ್‌ Updated:

ಅಕ್ಷರ ಗಾತ್ರ : | |

ನವದೆಹಲಿ: ಟೀಮ್ ಇಂಡಿಯಾ ನಾಯಕ ವಿರಾಟ್‌ ಕೊಹ್ಲಿ ಅವರು ಇಂದು (ಶುಕ್ರವಾರ) 33ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಆ ಹಿನ್ನೆಲೆಯಲ್ಲಿ ಟ್ವಿಟರ್‌ನಲ್ಲಿ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ.

ಕೊಹ್ಲಿ ಹುಟ್ಟುಹಬ್ಬದ ಅಂಗವಾಗಿ ಅಂತಾರಾಷ್ಟ್ರೀಯ ಕ್ರಿಕೆಟ್‌ ಮಂಡಳಿ (ಐಸಿಸಿ), ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (ಬಿಸಿಸಿಐ), ಐಪಿಎಲ್‌ ಫ್ರಾಂಚೈಸಿ ಆರ್‌ಸಿಬಿ ಸೇರಿದಂತೆ ಅನೇಕ ಅಭಿಮಾನಿಗಳು ಟ್ವಿಟರ್‌ನಲ್ಲಿ ಶುಭ ಕೋರಿದ್ದಾರೆ.

‘ನಗುಮುಖದ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಅವರು ಹುಟ್ಟುಹಬ್ಬ ಉಡುಗೊರೆಯಾಗಿ ಇಂದು ರಾತ್ರಿ ಸ್ಕಾಟ್ಲೆಂಡ್‌ ವಿರುದ್ಧ ಗೆಲುವು ಪಡೆಯುತ್ತಾರೆಯೇ?’ ಎಂದು ಐಸಿಸಿ ಟ್ವೀಟ್ ಮಾಡಿದೆ.

‘ವಿಶ್ವದ ಶ್ರೇಷ್ಠ ಬ್ಯಾಟ್ಸ್‌ಮನ್‌ಗಳಲ್ಲಿ ಒಬ್ಬರಾದ ವಿರಾಟ್‌ ಕೊಹ್ಲಿ ಅವರಿಗೆ ಜನ್ಮದಿನದ ಶುಭಾಶಯಗಳು’ ಎಂದು ಬಿಸಿಸಿಐ ಟ್ವೀಟ್‌ ಮಾಡಿದೆ.

‘ಕೊಹ್ಲಿ ಅವರಿಗೆ ಜನ್ಮದಿನದ ಶುಭಾಶಯಗಳು. ಆರ್‌ಸಿಬಿ ತಂಡಕ್ಕೆ ನಿಮ್ಮ ಕೊಡುಗೆ ಮಹತ್ವದ್ದಾಗಿದೆ. ಸಹ ಆಟಗಾರರೊಂದಿಗೆ ಉತ್ತಮ ಬಾಂಧವ್ಯ ಬೆಳೆಸಿಕೊಂಡಿದ್ದೀರಿ. ಜತೆಗೆ ವಿಶ್ವದಾದ್ಯಂತ ಲಕ್ಷಾಂತರ ಅಭಿಮಾನಿಗಳನ್ನು ಗಳಿಸಿರುವ ನಿಮಗೆ ಧನ್ಯವಾದಗಳು’ ಎಂದು ಆರ್‌ಸಿಬಿ ಟ್ವೀಟ್ ಮಾಡಿದೆ.

ಟೆಸ್ಟ್‌, ಏಕದಿನ ಹಾಗೂ ಟಿ–20 ಮಾದರಿಗಳಲ್ಲಿ ಭಾರತ ತಂಡವನ್ನು ಯಶಸ್ವಿಯಾಗಿ ಮುನ್ನಡೆಸಿದ ನಾಯಕರಲ್ಲಿ ವಿರಾಟ್‌ ಕೊಹ್ಲಿಯೂ ಒಬ್ಬರಾಗಿದ್ದಾರೆ.

2008ರ 19 ವರ್ಷದೊಳಗಿನವರ ವಿಶ್ವಕಪ್‌ ಟೂರ್ನಿಯಲ್ಲಿ ಭಾರತ ಪ್ರಶಸ್ತಿ ಗೆಲುವಿಗೆ ವಿರಾಟ್‌ ಕೊಹ್ಲಿ ಪ್ರಮುಖ ಪಾತ್ರವಹಿಸಿದ್ದರು. ಕೊಹ್ಲಿ ನಾಯಕತ್ವದಲ್ಲಿ ಭಾರತ ತಂಡ ಹೆಚ್ಚು ಟೆಸ್ಟ್‌ ಪಂದ್ಯಗಳನ್ನು ಗೆದ್ದಿದೆ. ಏಕದಿನ ಕ್ರಿಕೆಟ್‌ನಲ್ಲಿ ವೇಗವಾಗಿ 10,000 ರನ್‌ ಗಳಿಸಿದ ದಾಖಲೆ ಕೊಹ್ಲಿ ಹೆಸರಲ್ಲಿದೆ.

ಸದ್ಯ ನಡೆಯುತ್ತಿರುವ ಟಿ–20 ವಿಶ್ವಕಪ್‌ ಟೂರ್ನಿಯ ಬಳಿಕ ಕೊಹ್ಲಿ ‌ನಾಯಕತ್ವ ತ್ಯಜಿಸಲಿದ್ದಾರೆ. ಭಾರತ ಇಂದಿನ ಪಂದ್ಯದಲ್ಲಿ ಸ್ಕಾಟ್ಲೆಂಡ್ ವಿರುದ್ಧ ಸೆಣಸಲಿದೆ.

ಇದನ್ನೂ ಓದಿ... ಭಾರತ–ಸ್ಕಾಟ್ಲೆಂಡ್ ಹಣಾಹಣಿ ಇಂದು: ಸುಲಭ ಜಯದ ಮೇಲೆ ವಿರಾಟ್ ಪಡೆ ಕಣ್ಣು

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು