ಶುಕ್ರವಾರ, 9 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತವರು ನೆಲದಲ್ಲಿ ಅತಿ ಹೆಚ್ಚು ಶತಕ ಗಳಿಸಿ ಸಚಿನ್‌ ದಾಖಲೆ ಮುರಿದ ವಿರಾಟ್‌ ಕೊಹ್ಲಿ

Last Updated 15 ಜನವರಿ 2023, 12:14 IST
ಅಕ್ಷರ ಗಾತ್ರ

ವಿಶಾಖಪಟ್ಟಣಂ: ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ತವರಿನಲ್ಲಿ ಅತಿ ಹೆಚ್ಚು ಏಕದಿನ ಶತಕ ಸಿಡಿಸುವ ಮೂಲಕ ವಿಶ್ವದಾಖಲೆ ಬರೆದಿದ್ದಾರೆ.

ಶ್ರೀಲಂಕಾ ವಿರುದ್ಧ ತಿರುವನಂತಪುರದಲ್ಲಿ ನಡೆಯುತ್ತಿರುವ ಏಕದಿನ ಪಂದ್ಯದಲ್ಲಿ 34 ವರ್ಷದ ವಿರಾಟ್‌ ಕೊಹ್ಲಿ ಅವರು ಭಾನುವಾರ 166 (110) ರನ್‌ ಸಿಡಿಸಿದರು. ಭಾರತದಲ್ಲಿ ವಿರಾಟ್‌ ಕೊಹ್ಲಿ ಅವರ 21ನೇ ಏಕದಿನ ಶತಕವಿದು. ಈ ಮೂಲಕ ಅವರು ತವರಿನಲ್ಲಿ 20 ಏಕದಿನ ಶತಕ ಗಳಿಸಿರುವ ಸಚಿನ್ ತೆಂಡೂಲ್ಕರ್ ಅವರ ದಾಖಲೆ ಮುರಿದಿದ್ದಾರೆ.

ಇಂದು ದಾಖಲಾದ ಶತಕದೊಂದಿಗೆ ಏಕದಿನ ಕ್ರಿಕೆಟ್‌ನಲ್ಲಿ ವಿರಾಟ್‌ ಕೊಹ್ಲಿ ಅವರ ಒಟ್ಟು ಶತಕಗಳ ಸಂಖ್ಯೆ 46ಕ್ಕೆ ಏರಿಕೆಯಾಗಿದೆ. ಸಚಿನ್ ತೆಂಡೂಲ್ಕರ್ ಅವರು 49 ಶತಕಗಳನ್ನು ಸಿಡಿಸಿದ್ದಾರೆ.

ದಕ್ಷಿಣ ಆಫ್ರಿಕಾದ ಕ್ರಿಕೆಟರ್‌ ಹಾಶೀಮ್‌ ಆಮ್ಲಾ ಅವರು ತವರು ನೆಲದಲ್ಲಿ 14 ಏಕದಿನ ಶತಕ ಗಳಿಸಿದ್ದಾರೆ.

ಇವುಗಳನ್ನೂ ಓದಿ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT