ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಂಡನ್‌ನಲ್ಲಿ ಅನುಷ್ಕಾ–ವಿರಾಟ್‌ ವಿಹಾರ

Last Updated 19 ಜೂನ್ 2019, 19:50 IST
ಅಕ್ಷರ ಗಾತ್ರ

ಲಂಡನ್: ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅವರ ಪತ್ನಿ, ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಅವರು ಲಂಡನ್‌ಗೆ ಬಂದಿದ್ದಾರೆ. ದಂಪತಿಯು ಲಂಡನ್‌ನಲ್ಲಿ ಓಡಾಡುತ್ತಿರುವ ಚಿತ್ರವನ್ನು ಟ್ವಿಟರ್‌ನಲ್ಲಿ ಹಾಕಿಕೊಂಡಿದ್ದಾರೆ.

ವಿಶ್ವಕಪ್‌ ಟೂರ್ನಿ ಆರಂಭವಾಗಿ ಹದಿನೈದು ದಿನಗಳವರೆಗೆ ಯಾವುದೇ ಆಟಗಾರರು ಕುಟುಂಬದ ಸದಸ್ಯರನ್ನು ಕರೆತರುವಂತಿಲ್ಲ ಎಂದು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಸೂಚನೆ ನೀಡಿತ್ತು. ಭಾರತ ತಂಡವು ತನ್ನ ಮೊದಲ ಪಂದ್ಯವನ್ನು ಜೂನ್ 5ರಂದು ಆಡಿತ್ತು. ಇದೀಗ ಹದಿನೈದು ದಿನಗಳ ನಿರ್ಬಂಧವೂ ಮುಗಿದಿರುವುದರಿಂದ ಆಟಗಾರರ ಕುಟುಂಬ ಸದಸ್ಯರು ಇಂಗ್ಲೆಂಡ್‌ಗೆ ಲಗ್ಗೆ ಇಟ್ಟಿದ್ದಾರೆ.

ಶಿಖರ್ ಧವನ್ ಮತ್ತು ರೋಹಿತ್ ಶರ್ಮಾ ಅವರು ತಮ್ಮ ಕುಟುಂಬದ ಸದಸ್ಯರೊಂದಿಗೆ ಲಂಡನ್‌ನ ಬಸ್‌ನಲ್ಲಿ ಪ್ರಯಾಣ ಮಾಡುತ್ತಿರುವ ಚಿತ್ರಗಳನ್ನು ಇನ್ಸ್ಟಾಗ್ರಾಮ್‌ನಲ್ಲಿ ಹಾಕಿದ್ದಾರೆ.

ಮಧ್ಯಮವೇಗಿ ಜಸ್‌ಪ್ರೀತ್ ಬೂಮ್ರಾ ತಮ್ಮ ತಾಯಿಯೊಂದಿಗೆ ಇರುವ ಚಿತ್ರವನ್ನು ಟ್ವಿಟರ್‌ನಲ್ಲಿ ಹಾಕಿದ್ದಾರೆ.

ಮಹೇಂದ್ರಸಿಂಗ್ ಧೋನಿ ಅವರ ಪತ್ನಿ ಸಾಕ್ಷಿ ಸಿಂಗ್ ಮತ್ತು ಮಗಳು ಜೀವಾ ಅವರು ಜೂನ್ 5ರಂದು ದಕ್ಷಿಣ ಆಫ್ರಿಕಾ ವಿರುದ್ಧ ಸೌತಾಂಪ್ಟನ್‌ನಲ್ಲಿ ನಡೆದಿದ್ದ ಮೊದಲ ಪಂದ್ಯದಲ್ಲಿಯೇ ಹಾಜರಿದ್ದರು.

ಅವರು ಪ್ರೇಕ್ಷಕರ ಗ್ಯಾಲರಿಯಲ್ಲಿದ್ದ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟವಾಗಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT