ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ 2008ರಿಂದ ಒಂದೇ ಫ್ರಾಂಚೈಸಿ (ರಾಯಲ್ ಚಾಲೆಂಜರ್ಸ್ ಬೆಂಗಳೂರು) ಪರ ಆಡುತ್ತಿರುವ ವಿರಾಟ್ ಕೊಹ್ಲಿ ಅವರು ಇಂದು (ಏಪ್ರಿಲ್ 5) ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ವಿಶೇಷ ದಾಖಲೆಗಳ ಮೇಲೆ ಕಣ್ಣಿಟ್ಟಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಅತೀ ಹೆಚ್ಚು ರನ್ ಕಲೆಹಾಕಿರುವ ವಿರಾಟ್ ಕೊಹ್ಲಿಯವರು ಇಂದಿನ ಪಂದ್ಯದಲ್ಲಿ 16 ರನ್ ಗಳಿಸಿದರೆ, ಮುಂಬೈ ಇಂಡಿಯನ್ಸ್ನ ರೋಹಿತ್ ಶರ್ಮಾ ಅವರ ದಾಖಲೆ ಮುರಿಯಲಿದ್ದಾರೆ. ಮಾತ್ರವಲ್ಲ, 4 ಸಿಕ್ಸರ್ ಬಾರಿಸಿದರೆ ಐಪಿಎಲ್ನಲ್ಲಿ ವಿಶೇಷ ದಾಖಲೆಯೊಂದನ್ನು ತಮ್ಮ ಹೆಸರಿಗೆ ಸೇರಿಸಿಕೊಳ್ಳಲಿದ್ದಾರೆ.

ರೋಹಿತ್ ಶರ್ಮಾ ದಾಖಲೆ ಮೇಲೆ ವಿರಾಟ್ ಕಣ್ಣು:

ವಿರಾಟ್ ಕೊಹ್ಲಿ ಅವರು ಐಪಿಎಲ್ನಲ್ಲಿ ಸಿಎಸ್ಕೆ ತಂಡದ ವಿರುದ್ಧ 1,146 ರನ್ ಗಳಿಸಿದ್ದಾರೆ. ಇಂದಿನ ಪಂದ್ಯದಲ್ಲಿ ಅವರು 16 ರನ್ ಗಳಿಸಿದರೆ, ಐಪಿಎಲ್ನಲ್ಲಿ ಒಂದೇ ತಂಡದ ವಿರುದ್ಧ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎಂಬ ದಾಖಲೆ ತಮ್ಮದಾಗಿಸಿಕೊಳ್ಳಲಿದ್ದಾರೆ.

ಸದ್ಯ ಒಂದೇ ತಂಡದ ವಿರುದ್ಧ ಅತ್ಯಧಿಕ ರನ್ ಗಳಿಸಿರುವ ಆಟಗಾರ ಎಂಬ ದಾಖಲೆಯು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 36 ಪಂದ್ಯಗಳಲ್ಲಿ 1,161 ರನ್ ಗಳಿಸಿರುವ ರೋಹಿತ್ ಶರ್ಮಾ ಅವರ ಹೆಸರಿನಲ್ಲಿದೆ.

RCB ಪರ 300 ಸಿಕ್ಸರ್ ದಾಖಲೆ:

ವಿರಾಟ್ ಕೊಹ್ಲಿ ಆರ್ಸಿಬಿ ಪರ ಆರಂಭಿಕ ಆಟಗಾರನಾಗಿ ಆಡಲಿದ್ದಾರೆ. ಇಂದು ಅವರು 4 ಸಿಕ್ಸರ್ಗಳನ್ನು ಬಾರಿಸಲು ಯಶಸ್ವಿಯಾದರೆ, ಐಪಿಎಲ್ನಲ್ಲಿ ಒಂದೇ ತಂಡದ ಪರ 300 ಸಿಕ್ಸರ್ ಬಾರಿಸಿದ ವಿಶ್ವದ ಮೊದಲ ಬ್ಯಾಟರ್ ಎಂಬ ದಾಖಲೆ ತಮ್ಮದಾಗಿಸಿಕೊಳ್ಳಲಿದ್ದಾರೆ.

ಪ್ರಸ್ತುತ, ವಿರಾಟ್ ಕೊಹ್ಲಿ ಅವರು ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ 268 ಐಪಿಎಲ್ ಪಂದ್ಯಗಳನ್ನು ಆಡಿದ್ದು, 296 ಸಿಕ್ಸರ್ ಬಾರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.