ಮುಂಬೈ: ಇಲ್ಲಿನ ವಾಂಖೆಡೆ ಮೈದಾನದಲ್ಲಿ ಬಲಿಷ್ಠ ಮುಂಬೈ ಇಂಡಿಯನ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 18 ರನ್ಗಳ ಜಯ ದಾಖಲಿಸಿದೆ. ಆ ಮೂಲಕ ಅಂಕಪಟ್ಟಿಯಲ್ಲಿ 3ನೇ ಸ್ಥಾನಕ್ಕೆ ಏರಿದೆ.

ಇದೇ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಸಿಡಿಸಿದ ವಿರಾಟ್ ಕೊಹ್ಲಿ ಮುಂಬೈ ಇಂಡಿಯನ್ಸ್ ತಂಡದ ವಿರುದ್ಧ ವಿಶೇಷ ಮೈಲುಗಲ್ಲು ಸ್ಥಾಪಿಸಿದ್ದಾರೆ. ವಾಂಖೆಡೆಯಲ್ಲಿ ನಡೆದ ಪಂದ್ಯದಲ್ಲಿ ವಿರಾಟ್ ಅವರು 38 ಎಸೆತಗಳಲ್ಲಿ 5 ಬೌಂಡರಿ ಮತ್ತು 1 ಸಿಕ್ಸರ್ ಸೇರಿದಂತೆ 50 ರನ್ ಗಳಿಸಿದರು.

ಆ ಮೂಲಕ ಐಪಿಎಲ್ ಇತಿಹಾಸದಲ್ಲಿ ಮುಂಬೈ ಇಂಡಿಯನ್ಸ್ ತಂಡದ ವಿರುದ್ಧ 1,000 ರನ್ ಗಳಿಸಿದ ಮೊದಲ ಬ್ಯಾಟರ್ ಎಂಬ ಹೆಗ್ಗಳಿಕೆಗೆ ವಿರಾಟ್ ಕೊಹ್ಲಿ ಪಾತ್ರರಾಗಿದ್ದಾರೆ. ಮುಂಬೈ ವಿರುದ್ಧ ಆಡಿರುವ 36 ಇನಿಂಗ್ಸ್ಗಳಲ್ಲಿ ಕೊಹ್ಲಿ ಅವರು ಈ ಸಾಧನೆ ಮಾಡಿದ್ದಾರೆ. ಮಾತ್ರವಲ್ಲ, ಮುಂಬೈ ತಂಡದ ವಿರುದ್ಧ 21 ಇನಿಂಗ್ಸ್ಗಳಲ್ಲಿ 977 ರನ್ ಗಳಿಸಿರುವ ಕನ್ನಡಿಗ ಕೆ.ಎಲ್. ರಾಹುಲ್ ಅವರ ದಾಖಲೆಯನ್ನು ಮುರಿದಿದ್ದಾರೆ.

ವಿರಾಟ್ ಕೊಹ್ಲಿ ಹೊರತುಪಡಿಸಿ ಮುಂಬೈ ತಂಡದ ವಿರುದ್ಧ ಬೇರೆ ಯಾವುದೇ ಬ್ಯಾಟರ್ ಕೂಡ ಸಾವಿರ ರನ್ ಸಿಡಿಸಿದ ಸಾಧನೆ ಮಾಡಿಲ್ಲ.

ವಿರಾಟ್ ಕೊಹ್ಲಿ ಮುಂಬೈ ಇಂಡಿಯನ್ಸ್ ಹೊರತುಪಡಿಸಿ, ಸಿಎಸ್ಕೆ ವಿರುದ್ಧ 1,188, ಪಂಜಾಬ್ ಕಿಂಗ್ಸ್ ವಿರುದ್ಧ 1,159, ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 1,130 ಮತ್ತು ಕೋಲ್ಕತ್ತ ನೈಟ್ ರೈಡರ್ಸ್ ವಿರುದ್ಧ 1,021 ರನ್ ಕಲೆಹಾಕಿದ್ದಾರೆ. ಆ ಮೂಲಕ ವಿವಿಧ ಫ್ರಾಂಚೈಸಿ ತಂಡದ ವಿರುದ್ಧ ಸಾವಿರಕ್ಕೂ ಅಧಿಕ ರನ್ ಸಿಡಿಸಿದ ಸಾಧನೆ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.