2026ರ ಇಂಡಿಯನ್ ಪ್ರೀಮಿಯರ್ ಲೀಗ್ ಆವೃತ್ತಿ ಆರಂಭಕ್ಕೂ ಮುನ್ನ ರಾಯಲ್ ಚಾಲೆಂಜರ್ಸ್ ತಂಡದ ಅನುಭವಿ ಆಟಗಾರ ವಿರಾಟ್ ಕೊಹ್ಲಿ ಅವರು ಫ್ರಾಂಚೈಸಿ ಮುಂದೆ ದುಬಾರಿ ಬೇಡಿಕೆ ಒಂದನ್ನು ಇಟ್ಟಿದ್ದಾರೆ ಎಂದು ವರದಿಯಾಗಿತ್ತು. ಇದಕ್ಕೆ ಸ್ವತಃ ವಿರಾಟ್ ಅವರೆ ಪ್ರತಿಕ್ರಿಯಿಸಿದ್ದಾರೆ.

ಕೊಹ್ಲಿ ಅವರು ಐಪಿಎಲ್ ನಡುವೆ ಲಂಡನ್ ಮತ್ತು ಭಾರತದ ನಡುವೆ ಪ್ರಯಾಣಿಸಲು ಚಾರ್ಟರ್ಡ್ ಜೆಟ್ ನೀಡುವಂತೆ ಕೇಳಿದ್ದರು ಎಂದು ವರದಿಯಾಗಿತ್ತು.

ವರದಿಯಲ್ಲಿ ಆರ್ಸಿಬಿ ಪಂದ್ಯಗಳ ನಡುವೆ 3 ದಿನಗಳ ಅಂತರವಿದ್ದರೆ, ವಿರಾಟ್ ಅವರು ಲಂಡನ್ಗೆ ಪ್ರಯಾಣಿಸುವುದಾಗಿಯೂ ಮತ್ತು ಪಂದ್ಯಕ್ಕೆ ಒಂದು ದಿನ ಬಾಕಿ ಇರುವಂತೆ ತಂಡವನ್ನು ಸೇರಿಕೊಳ್ಳುವುದಾಗಿಯೂ ಫ್ರಾಂಚೈಸಿಗೆ ತಿಳಿಸಿದ್ದಾರೆ ಎಂದು ವರದಿಯಾಗಿತ್ತು.

ಸದ್ಯ, ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದ ಈ ವದಂತಿಯ ಕುರಿತು ಸ್ಪಷ್ಟನೆ ನೀಡಿರುವ ವಿರಾಟ್ ಕೊಹ್ಲಿ ಅವರು ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ 'ನಗುವ' ಎರಡು ಎಮೋಜಿಗಳನ್ನು ಹಾಕುವ ಮೂಲಕ ವದಂತಿಗಳನ್ನು ತಳ್ಳಿಹಾಕಿದ್ದಾರೆ.

ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮಾರ್ಚ್ 28ರಂದು ಸನ್ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧ ತನ್ನ ಮೊದಲ ಪಂದ್ಯವನ್ನು ಆಡಲಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ 267 ಪಂದ್ಯಗಳನ್ನು ಆಡಿರುವ ವಿರಾಟ್, 8 ಶತಕ ಮತ್ತು 63 ಅರ್ಧಶತಕ ಸಹಿತ 8,661 ರನ್ ಗಳಿಸಿದ್ದಾರೆ. ಅವರು ಈ ಋತುವಿನಲ್ಲಿ 339 ರನ್ ಗಳಿಸಿದರೆ, ಐಪಿಎಲ್ನಲ್ಲಿ 9,000 ರನ್ ಗಳಿಸಿದ ಮೊದಲ ಆಟಗಾರ ಎಂಬ ಸಾಧನೆ ಮಾಡಲಿದ್ದಾರೆ.

ಕಳೆದ ಋತುವಿನಲ್ಲಿ ವಿರಾಟ್ ಕೊಹ್ಲಿ ಆಡಿದ 15 ಇನಿಂಗ್ಸ್ಗಳಿಂದ 8 ಅರ್ಧಶತಕ ಸಹಿತ 54.75 ಸರಾಸರಿಯಲ್ಲಿ 657 ರನ್ ಗಳಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.