ಗುರುವಾರ , ಮೇ 26, 2022
28 °C

ದಕ್ಷಿಣ ಆಫ್ರಿಕಾ ವಿರುದ್ಧ ಏಕದಿನ ಕ್ರಿಕೆಟ್ ಸರಣಿಗೆ ವಿರಾಟ್ ಕೊಹ್ಲಿ ಅಲಭ್ಯ: ವರದಿ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ನವದೆಹಲಿ: ದಕ್ಷಿಣ ಆಫ್ರಿಕಾದಲ್ಲಿ ಜನವರಿಯಲ್ಲಿ ನಡೆಯಲಿರುವ ಏಕದಿನ ಕ್ರಿಕೆಟ್ ಸರಣಿ ವೇಳೆ ವಿರಾಟ್ ಕೊಹ್ಲಿ ತಂಡದಿಂದ ಹೊರಗುಳಿಯುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

ಮಂಡಿರಜ್ಜು ನೋವಿನಿಂದಾಗಿ ಆರಂಭಿಕ ಆಟಗಾರ ರೋಹಿತ್ ಶರ್ಮಾ ಟೆಸ್ಟ್ ಸರಣಿಗೆ ಲಭ್ಯರಿಲ್ಲ ಎಂದು ಬಿಸಿಸಿಐ ಸೋಮವಾರ ತಿಳಿಸಿತ್ತು. ಅದರ ಬೆನ್ನಲ್ಲೇ, ಮುಂಬರುವ ಏಕದಿನ ಸರಣಿಗೆ ಕೊಹ್ಲಿ ಗೈರಾಗುವ ಸಾಧ್ಯತೆ ಇದೆ ಎಂದು ಮೂಲಗಳ ಮಾಹಿತಿ ಉಲ್ಲೇಖಿಸಿ ‘ಟೈಮ್ಸ್ ಆಫ್ ಇಂಡಿಯಾ’ ವರದಿ ಮಾಡಿದೆ.

ಓದಿ: 

ಈ ಕುರಿತು ಕೊಹ್ಲಿ ಈಗಾಗಲೇ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಗೆ (ಬಿಸಿಸಿಐ) ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.

ಭಾರತ ಹಾಗೂ ದಕ್ಷಿಣ ಆಫ್ರಿಕಾ ಮಧ್ಯೆ ಟೆಸ್ಟ್ ಸರಣಿಯ ಬಳಿಕ ಮೂರು ಏಕದಿನ ಪಂದ್ಯಗಳು ನಡೆಯಲಿವೆ.

ವಿರಾಟ್ ಕೊಹ್ಲಿ ಅವರು ಮಗಳು ವಮಿಕಾ ಮೊದಲ ಹುಟ್ಟುಹಬ್ಬ ಆಚರಿಸುವ ಸಲುವಾಗಿ ಏಕದಿನ ಸರಣಿಯಿಂದ ಹೊರಗುಳಿಯಲಿದ್ದಾರೆ. ಕಳೆದ ಜನವರಿ 11ರಂದು ವಮಿಕಾ ಜನಿಸಿದ್ದು, ಟೆಸ್ಟ್ ಸರಣಿಯ ಬಳಿಕ ಕುಟುಂಬದವರನ್ನು ಸೇರಿಕೊಂಡು ಮಗಳ ಮೊದಲ ಹುಟ್ಟುಹಬ್ಬ ಆಚರಿಸುವ ಇರಾದೆ ಕೊಹ್ಲಿಯದ್ದಾಗಿದೆ ಎಂದು ವರದಿ ಉಲ್ಲೇಖಿಸಿದೆ.

ಕಳೆದ ವರ್ಷ ಮಗಳು ಜನಿಸಿದ ವೇಳೆಯೂ ಕೊಹ್ಲಿ ಅವರು ಪಿತೃತ್ವ ರಜೆ ಪಡೆದು ತಂಡದಿಂದ ಹೊರಗುಳಿದಿದ್ದರು. ಆಗ ಟೀಮ್ ಇಂಡಿಯಾವು ಅಡಿಲೇಡ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿಯ ಮೊದಲ ಪಂದ್ಯವನ್ನಾಡಿತ್ತು.

ಓದಿ: 

ದಕ್ಷಿಣ ಆಫ್ರಿಕಾ ವಿರುದ್ಧದ ಕೊನೆಯ ಟೆಸ್ಟ್ ಜನವರಿ 11ರಿಂದ ಆರಂಭಗೊಳ್ಳಲಿದೆ. ಏಕದಿನ ಕ್ರಿಕೆಟ್ ಟೂರ್ನಿ ಜನವರಿ 19ರಿಂದ ಆರಂಭವಾಗಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು