2026ರ ಐಪಿಎಲ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ವಿರಾಟ್ ಕೊಹ್ಲಿ ಅವರು ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಈ ನಡುವೆ ಜರ್ಮನಿಯ ಸಾಮಾಜಿಕ ಜಾಲತಾಣದ ಪ್ರಭಾವಿ (Social Media Influencer) ಒಬ್ಬರ ಫೋಟೊಗೆ ವಿರಾಟ್ ಅವರು ಲೈಕ್ ಮಾಡಿದ್ದಾರೆ ಎಂಬ ಪೋಸ್ಟ್ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.

ವಿರಾಟ್ ಅವರು ಲೈಕ್ ವಿವಾದ ಈ ಹಿಂದೆಯೂ ಮುನ್ನೆಲೆಗೆ ಬಂದಿತ್ತು. 2025 ರಲ್ಲಿ ಮಾಡೆಲ್ ಅವನೀತ್ ಕೌರ್ ಅವರ ಪೋಟೊಗೆ ವಿರಾಟ್ ಅವರು ತಮ್ಮ ಸಾಮಾಜಿಕ ಮಾಧ್ಯಮ ಇನ್ಸ್ಟಾಗ್ರಾಮ್ನಲ್ಲಿ ಲೈಕ್ ಮಾಡಿದ್ದರು ಎಂಬ ಅಂಶ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಬಳಿಕ ಇದು ‘ಅಲ್ಗಾರಿದಮ್’ನಿಂದಾಗಿರುವ ತಪ್ಪು ಎಂದು ತಿಳಿದು ಬಂದಿತ್ತು.

ವಿರಾಟ್ ಅವರ ಇನ್ಸ್ಟಾಗ್ರಾಮ್ ಅಕೌಂಟ್ನಿಂದ ಜರ್ಮನ್ನ ಲಿಜ್ಲಾಜ್ ಅವರ ಫೋಟೊಗೆ ಲೈಕ್ ಮಾಡಿದ್ದಾರೆ ಎನ್ನಲಾಗುದ ಫೋಟೊ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಅಲ್ಲದೇ ಈ ಫೋಟೊ ತೀವ್ರ ಚರ್ಚೆಗೂ ಗ್ರಾಸವಾಗಿದೆ. ಸಾಮಾಜಿಕ ಮಾಧ್ಯಮದಲ್ಲಿ ಬಳಕೆದಾರೊಬ್ಬರು ‘ತಾಳ್ಮೆಯಿಂದ ಇರಿ, ಇದು ಅಲ್ಗಾರಿದಮ್ನಿಂದಾಗಿದೆ’ ಎಂದು ಬರೆದುಕೊಂಡಿದ್ದಾರೆ.

ಈ ಹಿಂದೆ ಅವನೀತ್ ಕೌರ್ ವಿವಾದದ ಸಂದರ್ಭದಲ್ಲಿ ವಿರಾಟ್ ಕೊಹ್ಲಿ ಅವರು ಸ್ಪಷ್ಟಣೆ ನೀಡಿದ್ದರು. ‘ನನ್ನ ಫೀಡ್ ಅನ್ನು ತೆರವುಗೊಳಿಸುವಾಗ, ಅಲ್ಗಾರಿದಮ್ ತಪ್ಪಾಗಿ ಲೈಕ್ ಅನ್ನು ನೋಂದಾಯಿಸಿರಬಹುದು ಎಂದು ಸ್ಪಷ್ಟಪಡಿಸಿದ್ದರು. ಇದರ ಹಿಂದೆ ಯಾವುದೇ ಉದ್ದೇಶವಿರಲಿಲ್ಲ. ಯಾವುದೇ ಅನಗತ್ಯ ಊಹೆಗಳನ್ನು ಮಾಡಬಾರದೆಂದು ನಾನು ವಿನಂತಿಸುತ್ತೇನೆ. ನಿಮ್ಮ ತಿಳುವಳಿಕೆಗೆ ಧನ್ಯವಾದಗಳು’ ಎಂದು ಹೇಳಿದ್ದರು.

ಸದ್ಯ ಸಾಮಾಜಿಕ ಮಾಧ್ಯಮದಲ್ಲಿ ಇದು ಅಲ್ಗಾರಿದಮ್ನ ತಪ್ಪು ಎಂದು ವಿರಾಟ್ ಅಭಿಮಾನಿಗಳು ಹೇಳುತ್ತಿದ್ದಾರೆ. ಆದರೆ, ಈ ಬಗ್ಗೆ ವಿರಾಟ್ ಇದುವರೆಗೆ ಯಾವುದೇ ಸ್ಪಷ್ಟನೆ ನೀಡಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.