ಬೆಂಗಳೂರು: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಮಗದೊಂದು ದಾಖಲೆಯ ಹೊಸ್ತಿಲಲ್ಲಿದ್ದಾರೆ.

ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಭಾರತದ ಎರಡನೇ ಬ್ಯಾಟರ್ ಎನಿಸಿಕೊಳ್ಳಲು ಕೊಹ್ಲಿಗೆ ಇನ್ನು ಕೇವಲ 207 ರನ್ ಗಳಿಸಬೇಕಾದ ಅಗತ್ಯವಿದೆ.

ಈ ಮೂಲಕ ಟೀಮ್ ಇಂಡಿಯಾ ಕೋಚ್, ಮಾಜಿ ದಿಗ್ಗಜ ರಾಹುಲ್ ದ್ರಾವಿಡ್ ದಾಖಲೆಯನ್ನು ಮುರಿಯಲಿದ್ದಾರೆ.

ಇದನ್ನೂ ಓದಿ:ಮೊಹಾಲಿ ನೆಟ್ಸ್ನಲ್ಲಿ ವಿರಾಟ್ ತಾಲೀಮು

ಒಟ್ಟಾರೆಯಾಗಿ ಜಾಗತಿಕ ಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿರುವ ಕೊಹ್ಲಿ ಆರನೇ ಸ್ಥಾನಕ್ಕೆ ಜಿಗಿಯಲಿದ್ದಾರೆ.

ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆಯನ್ನು ಭಾರತದವರೇ ಆದ ಮಾಜಿ ದಿಗ್ಗಜ ಸಚಿನ್ ತೆಂಡೂಲ್ಕರ್ ಹೊಂದಿದ್ದಾರೆ.

ಸಚಿನ್ ತೆಂಡೂಲ್ಕರ್ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಒಟ್ಟು 34,357 ರನ್ ಗಳಿಸಿದ್ದಾರೆ. ರಾಹುಲ್ ದ್ರಾವಿಡ್ 24,208 ಮತ್ತು ವಿರಾಟ್ ಕೊಹ್ಲಿ 24,002 ರನ್ ಪೇರಿಸಿದ್ದಾರೆ.

468 ಪಂದ್ಯಗಳಲ್ಲಿ (522 ಇನ್ನಿಂಗ್ಸ್) ಕೊಹ್ಲಿ 53.81ರ ಸರಾಸರಿಯಲ್ಲಿ 24,002 ರನ್ ಗಳಿಸಿದ್ದಾರೆ. ಇದರಲ್ಲಿ 71 ಶತಕ ಹಾಗೂ 124 ಅರ್ಧಶತಕಗಳನ್ನು ಒಳಗೊಂಡಿವೆ.

ವಿರಾಟ್ ಕೊಹ್ಲಿ ಏಕದಿನದಲ್ಲಿ 12,344, ಟೆಸ್ಟ್‌ನಲ್ಲಿ 8,074 ಮತ್ತು ಟ್ವೆಂಟಿ-20 ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ 3,584 ರನ್ ಗಳಿಸಿದ್ದಾರೆ.

ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟರ್‌ಗಳ ಪಟ್ಟಿ ಇಂತಿದೆ:
ಸಚಿನ್ ತೆಂಡೂಲ್ಕರ್: 34,357
ಕುಮಾರ ಸಂಗಕ್ಕರ: 28,016
ರಿಕಿ ಪಾಂಟಿಂಗ್: 27,483
ಮಹೇಲಾ ಜಯವರ್ಧನೆ: 25,957
ಜ್ಯಾಕ್ ಕಾಲಿಸ್: 25,534
ರಾಹುಲ್ ದ್ರಾವಿಡ್: 24,208
ವಿರಾಟ್ ಕೊಹ್ಲಿ: 24,002

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.