ಗುರುವಾರ , ಮಾರ್ಚ್ 4, 2021
29 °C

ಟೀಂ ಇಂಡಿಯಾ ಸದಸ್ಯರ ಫೋಟೊ ಟ್ವೀಟಿಸಿದ ವಿರಾಟ್ ಕೊಹ್ಲಿ, ರೋಹಿತ್ ಎಲ್ಲಿ? 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಟಿ20 ಪಂದ್ಯಕ್ಕಾಗಿ ಅಮೆರಿಕದಲ್ಲಿರುವ ಭಾರತೀಯ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಶುಕ್ರವಾರ ಬೆಳಗ್ಗೆ ತಂಡದ ಸದಸ್ಯರ ಫೋಟೊವೊಂದನ್ನು ಟ್ವೀಟಿಸಿದ್ದಾರೆ. 

SQUAD ಎಂಬ ಶೀರ್ಷಿಕೆ ನೀಡಿ ಟ್ವೀಟಿಸಿದ ಈ ಗ್ರೂಪ್ ಫೋಟೊದಲ್ಲಿ ಕೊಹ್ಲಿಯೊಂದಿಗೆ ರವೀಂದ್ರ ಜಡೇಜಾ, ನವ್‌ದೀಪ್ ಸೈನಿ, ಖಲೀಲ್ ಅಹ್ಮದ್, ಶ್ರೇಯಸ್ ಅಯ್ಯರ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್ ಮತ್ತು ಕೆ.ಎಲ್. ರಾಹುಲ್ ಇದ್ದಾರೆ.ಆದರೆ ತಂಡದ ಉಪ ನಾಯಕ ರೋಹಿತ್ ಶರ್ಮಾ ಈ ಫೋಟೊದಲ್ಲಿಲ್ಲ.

ಈ ಟ್ವೀಟ್ ಬಗ್ಗೆ ಪ್ರತಿಕ್ರಿಯಿಸಿದ ನೆಟ್ಟಿಗರು ರೋಹಿತ್ ಎಲ್ಲಿ ಎಂದು ಕೇಳಿದ್ದಾರೆ. 

ಕೆಲವು ದಿನಗಳ ಹಿಂದೆ ರೋಹಿತ್ ಶರ್ಮಾ ಮತ್ತು ಕೊಹ್ಲಿ ನಡುವೆ ಶೀತಲ ಸಮರವೇರ್ಪಟ್ಟಿದೆ ಎಂದು ಮಾಧ್ಯಮಗಳು ವರದಿ ಮಾಡಿದ್ದವು. ಆದರೆ ಅಮೆರಿಕ, ವೆಸ್ಟ್ ಇಂಡೀಸ್ ಪ್ರವಾಸಕ್ಕೆ ಹೊರಡುವ ಮುನ್ನ ಸುದ್ದಿಗೋಷ್ಠಿ ನಡೆಸಿದ ವಿರಾಟ್ ಕೊಹ್ಲಿ,  ರೋಹಿತ್ ಶರ್ಮಾ ಮತ್ತು ನನ್ನ ಮಧ್ಯೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ, ಅದೆಲ್ಲವೂ ವದಂತಿ ಎಂದು ಪ್ರತಿಕ್ರಿಯಿಸಿದ್ದರು.

ಇದನ್ನೂ ಓದಿ: ರೋಹಿತ್ ಶರ್ಮಾ ಜತೆ ಮನಸ್ತಾಪ ಇಲ್ಲ: ವಿರಾಟ್ ಕೊಹ್ಲಿ​

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು