ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರಾಮವಾಗಿ ಇರುವುದು ಪ್ರಗತಿಗೆ ಮಾರಕ: ವರ್ಕೌಟ್ ವಿಡಿಯೊ ಹಂಚಿಕೊಂಡ ವಿರಾಟ್ ಕೊಹ್ಲಿ

Last Updated 27 ನವೆಂಬರ್ 2021, 12:33 IST
ಅಕ್ಷರ ಗಾತ್ರ

ನವದೆಹಲಿ: ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರು ಜಿಮ್‌ನಲ್ಲಿ ವರ್ಕೌಟ್‌ ಮಾಡುತ್ತಿರುವ ವಿಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.

ಮೈಕ್ರೊ ಬ್ಲಾಗಿಂಗ್ ಪ್ಲಾಟ್‌ಫಾರ್ಮ್ ‘ಕೂ’ ಖಾತೆಯಲ್ಲಿ ವಿಡಿಯೊ ಹಂಚಿಕೊಂಡಿರುವ ಕೊಹ್ಲಿ, ‘ಆರಾಮವಾಗಿ ಇರುವುದು ಪ್ರಗತಿಗೆ ಮಾರಕ’ ಎಂಬ ಅಮೆರಿಕದ ನಟ, ನಿರ್ದೇಶಕ ಡೆನ್ಜೆಲ್ ವಾಷಿಂಗ್ಟನ್ ಅವರ ಸಾಲುಗಳನ್ನು ಬರೆದುಕೊಂಡಿದ್ದಾರೆ.

ಕೊಹ್ಲಿ ಫಿಟ್ನೆಸ್‌ಗೆ ಹೆಚ್ಚು ಆದ್ಯತೆ ನೀಡುತ್ತಾರೆ. ಸದ್ಯ ಈ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿದ್ದು, ಅನೇಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಟಿ–20 ವಿಶ್ವಕಪ್‌ ಬಳಿಕ ವಿಶ್ರಾಂತಿ ಪಡೆದಿರುವ ವಿರಾಟ್ ಕೊಹ್ಲಿ ಅವರು ಕುಟುಂಬದವರೊಂದಿಗೆ ಸಮಯ ಕಳೆಯುತ್ತಿದ್ದಾರೆ.

ಸದ್ಯ ನ್ಯೂಜಿಲೆಂಡ್‌ ವಿರುದ್ಧ ನಡೆಯುತ್ತಿರುವ ಟೆಸ್ಟ್‌ ಸರಣಿಯಲ್ಲಿ ಅಜಿಂಕ್ಯ ರಹಾನೆ, ಭಾರತ ತಂಡವನ್ನು ಮುನ್ನಡೆಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT