ದುಬೈ: ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅವರು ಐಸಿಸಿ ಟ್ವೆಂಟಿ–20 ಬ್ಯಾಟ್ಸ್‌ಮನ್‌ಗಳ ರ‍್ಯಾಂಕಿಂಗ್‌ನಲ್ಲಿ ಅಗ್ರ ಐದರೊಳಗಿನ ಸ್ಥಾನಕ್ಕೆ ಮರಳಿದ್ದಾರೆ. ಇಂಗ್ಲೆಂಡ್ ಎದುರು ನಡೆಯುತ್ತಿರುವ ಸರಣಿಯಲ್ಲಿ ಉತ್ತಮಸಾಮರ್ಥ್ಯ ತೋರುತ್ತಿದ್ದು, ಅವರ ಸ್ಥಾನದಲ್ಲಿ ಬಡ್ತಿಗೆ ಕಾರಣವಾಗಿದೆ.

ರ‍್ಯಾಂಕಿಂಗ್‌ನಲ್ಲಿಕೊಹ್ಲಿ ಸದ್ಯ ಐದನೇ ಸ್ಥಾನದಲ್ಲಿದ್ದಾರೆ. ಇಂಗ್ಲೆಂಡ್ ವಿರುದ್ಧ ನಡೆದ ಎರಡು ಹಾಗೂ ಮೂರನೇ ಪಂದ್ಯದಲ್ಲಿ ಕ್ರಮವಾಗಿ 73 ಹಾಗೂ 77 ರನ್ ಗಳಿಸಿದ ಅವರು ಒಂದು ಸ್ಥಾನ ಏರಿಕೆ ಕಂಡಿದ್ದಾರೆ. ಅವರ ಬಳಿ ಈಗ 744 ರೇಟಿಂಗ್ ಪಾಯಿಂಟ್‌ಗಳಿವೆ.

ಸರಣಿಯ ಎರಡು ಪಂದ್ಯಗಳಲ್ಲಿ ಸೊನ್ನೆ ಸುತ್ತಿರುವ ಕೆ.ಎಲ್.ರಾಹುಲ್ ಅವರು ನಾಲ್ಕನೇ ಸ್ಥಾನದಲ್ಲೇ ಮುಂದುವರಿದಿದ್ದಾರೆ. ಶ್ರೇಯಸ್ ಅಯ್ಯರ್ 31ನೇ ಹಾಗೂ ರಿಷಭ್ ಪಂತ್ 80ನೇ ಕ್ರಮಾಂಕಗಳಿಗೆ ಬಡ್ತಿ ಪಡೆದಿದ್ದಾರೆ.

ಬೌಲರ್‌ಗಳ ವಿಭಾಗದಲ್ಲಿ ಆಲ್‌ರೌಂಡರ್ ವಾಷಿಂಗ್ಟನ್ ಸುಂದರ್ 11ನೇ ಸ್ಥಾನಕ್ಕೆ, ಶಾರ್ದೂಲ್ ಠಾಕೂರ್ 27ನೇ ಹಾಗೂ ಭುವನೇಶ್ವರ ಕುಮಾರ್ 45ನೇ ಸ್ಥಾನಕ್ಕೇರಿದ್ದಾರೆ.

ಇಂಗ್ಲೆಂಡ್‌ನ ಜೋಸ್ ಬಟ್ಲರ್ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ 19ನೇ ಕ್ರಮಾಂಕದಲ್ಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.