ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಸಿಸಿ ರ‍್ಯಾಂಕಿಂಗ್‌: ಮೊದಲೆರಡು ಸ್ಥಾನಗಳಲ್ಲಿ ಮುಂದುವರಿದ ಕೊಹ್ಲಿ, ರೋಹಿತ್

ಐಸಿಸಿ ಏಕದಿನ ಬ್ಯಾಟ್ಸ್‌ಮನ್‌ಗಳ ರ‍್ಯಾಂಕಿಂಗ್‌
Last Updated 20 ಜನವರಿ 2020, 13:20 IST
ಅಕ್ಷರ ಗಾತ್ರ

ದುಬೈ: ಭಾರತ ತಂಡದ ನಾಯಕ ವಿರಾಟ್‌ ಕೊಹ್ಲಿ ಮತ್ತು ಉಪ ನಾಯಕ ರೋಹಿತ್‌ ಶರ್ಮಾ ಅವರು ಅಂತರರಾಷ್ಟ್ರೀಯ ಕ್ರಿಕೆಟ್‌ ಕೌನ್ಸಿಲ್‌ (ಐಸಿಸಿ) ಸೋಮವಾರ ಬಿಡುಗಡೆ ಮಾಡಿರುವ ಏಕದಿನ ಬ್ಯಾಟ್ಸ್‌ಮನ್‌ಗಳ ವಿಶ್ವ ಕ್ರಮಾಂಕ ಪಟ್ಟಿಯಲ್ಲಿ ಕ್ರಮವಾಗಿ ಮೊದಲ ಮತ್ತು ಎರಡನೇ ಸ್ಥಾನಗಳಲ್ಲಿ ಮುಂದುವರಿದಿದ್ದಾರೆ.

ಬೌಲರ್‌ಗಳ ಪಟ್ಟಿಯಲ್ಲಿ ಜಸ್‌ಪ್ರೀತ್‌ ಬೂಮ್ರಾ ಅಗ್ರಪಟ್ಟ ಉಳಿಸಿಕೊಂಡಿದ್ದಾರೆ.

ಆಸ್ಟ್ರೇಲಿಯಾ ಎದುರಿನ ಮೂರು ಪಂದ್ಯಗಳ ಸರಣಿಯಲ್ಲಿ ಒಟ್ಟು 183ರನ್‌ ಗಳಿಸಿ ಸರಣಿ ಶ್ರೇಷ್ಠ ಗೌರವಕ್ಕೆ ಭಾಜನರಾಗಿದ್ದ ಕೊಹ್ಲಿ 886 ಪಾಯಿಂಟ್ಸ್‌ ಹೊಂದಿದ್ದಾರೆ. ಅವರು ಎರಡು ಪಾಯಿಂಟ್ಸ್‌ ಹೆಚ್ಚಿಸಿಕೊಂಡಿದ್ದಾರೆ. 171ರನ್‌ ಬಾರಿಸಿದ್ದ ರೋಹಿತ್‌ ಖಾತೆಯಲ್ಲಿ 868 ಪಾಯಿಂಟ್ಸ್‌ ಇವೆ.

ಪಾಕಿಸ್ತಾನದ ಬಾಬರ್‌ ಅಜಂ (829 ಪಾ.) ಮೂರನೇ ಸ್ಥಾನದಲ್ಲಿದ್ದಾರೆ. ದಕ್ಷಿಣ ಆಫ್ರಿಕಾದ ಫಾಫ್‌ ಡು ಪ್ಲೆಸಿ ಮತ್ತು ನ್ಯೂಜಿಲೆಂಡ್‌ನ ರಾಸ್‌ ಟೇಲರ್‌ ಅವರು ಕ್ರಮವಾಗಿ ನಾಲ್ಕು ಮತ್ತು ಐದನೇ ಸ್ಥಾನಗಳನ್ನು ಕಾಪಾಡಿಕೊಂಡಿದ್ದಾರೆ.

ಎಡಗೈ ಬ್ಯಾಟ್ಸ್‌ಮನ್‌ ಶಿಖರ್‌ ಧವನ್‌ 15ನೇ ಸ್ಥಾನಕ್ಕೆ ಜಿಗಿದಿದ್ದಾರೆ. ಆಸ್ಟ್ರೇಲಿಯಾ ಎದುರಿನ ಸರಣಿಯಲ್ಲಿ ಎರಡು ಪಂದ್ಯಗಳಿಂದ 170ರನ್‌ ಬಾರಿಸಿದ್ದ ಅವರು ಒಟ್ಟು ಏಳು ಸ್ಥಾನ ಬಡ್ತಿ ಹೊಂದಿದ್ದಾರೆ. ಆರಂಭ ಆಟಗಾರ ಕೆ.ಎಲ್‌.ರಾಹುಲ್‌ 50ನೇ ಸ್ಥಾನಕ್ಕೆ ಏರಿದ್ದಾರೆ. ಅವರು ಮೊದಲು 71ನೇ ಸ್ಥಾನದಲ್ಲಿದ್ದರು.

ಬೌಲರ್‌ಗಳ ಪಟ್ಟಿಯಲ್ಲಿ ರವೀಂದ್ರ ಜಡೇಜ 29ರಿಂದ 27ನೇ ಸ್ಥಾನಕ್ಕೆ ಬಡ್ತಿ ಪಡೆದಿದ್ದಾರೆ. ಆಲ್‌ರೌಂಡರ್‌ಗಳ ಪಟ್ಟಿಯಲ್ಲಿ ಅವರು 10ನೇ ಸ್ಥಾನಕ್ಕೇರಿದ್ದಾರೆ.

ಆಸ್ಟ್ರೇಲಿಯಾದ ಬ್ಯಾಟ್ಸ್‌ಮನ್‌ಗಳಾದ ಡೇವಿಡ್‌ ವಾರ್ನರ್‌ ಮತ್ತು ಸ್ಟೀವ್‌ ಸ್ಮಿತ್‌ ಅವರು ಕ್ರಮವಾಗಿ ಆರು ಮತ್ತು 23ನೇ ಸ್ಥಾನಗಳಿಗೆ ಪ್ರಗತಿ ಕಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT