ಪರ್ತ್: ಆಸ್ಟ್ರೇಲಿಯಾ ವಿರುದ್ಧ ಭಾನುವಾರ (ಅಕ್ಟೋಬರ್ 19) ದಿಂದ ಆರಂಭವಾಗಲಿರುವ ಏಕದಿನ ಸರಣಿಗೂ ಮುನ್ನ ಭಾರತ ತಂಡ ಪರ್ತ್ ಮೈದಾನದಲ್ಲಿ ಕಠಿಣ ಅಭ್ಯಾಸ ನಡೆಸುತ್ತಿದೆ. ಅದರಲ್ಲೂ ವಿಶೇಷವಾಗಿ ಹಲವು ದಿನಗಳಿಂದ ಕ್ರಿಕೆಟ್ನಿಂದ ದೂರ ಉಳಿದಿರುವ ಹಿರಿಯ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ನೆಟ್ಸ್ನಲ್ಲಿ ಕಠಿಣ ಅಭ್ಯಾಸ ನಡೆಸಿದ್ದಾರೆ.

ಫೆಬ್ರವರಿ-ಮಾರ್ಚ್ನಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿಯ ಸಂದರ್ಭದಲ್ಲಿ ಟೀಂ ಇಂಡಿಯಾ ಪರ ಕೊನೆಯದಾಗಿ ಆಡಿದ್ದ ಮಾಜಿ ನಾಯಕ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಮೇಲೆ ಎಲ್ಲರ ಕಣ್ಣು ನೆಟ್ಟಿದೆ.

ಭಾರತದ ಇಬ್ಬರು ಮಾಜಿ ನಾಯಕರು ನೆಟ್ಸ್ನಲ್ಲಿ ಸುಮಾರು 30 ನಿಮಿಷಗಳಿಗೂ ಹೆಚ್ಚು ಕಾಲ ಬ್ಯಾಟಿಂಗ್ ಅಭ್ಯಾಸ ನಡೆಸಿದ್ದಾರೆ. ಅಕ್ಟೋಬರ್ 19 ರಿಂದ ಪ್ರಾರಂಭವಾಗುವ 3 ಏಕದಿನ ಮತ್ತು 5 ಟಿ20 ಪಂದ್ಯಗಳನ್ನು ಆಡಲು ಭಾರತ ತಂಡದ ಆಟಗಾರರು ಬುಧವಾರ ಮತ್ತು ಗುರುವಾರ ಎರಡು ಬ್ಯಾಚ್ಗಳಲ್ಲಿ ಆಸ್ಟ್ರೇಲಿಯಾಗೆ ಆಗಮಿಸಿದ್ದರು.

ನೆಟ್ಸ್ನಲ್ಲಿ ಸಮಯ ಕಳೆದ ಬಳಿಕ ರೋಹಿತ್ ಶರ್ಮ ಮುಖ್ಯ ತರಬೇತುದಾರರಾಗಿರುವ ಗೌತಮ್ ಗಂಭೀರ್ ಅವರೊಂದಿಗೆ ದೀರ್ಘ ಮಾತುಕತೆ ನಡೆಸುತ್ತಿರುವುದು ಕಂಡು ಬಂದಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.