ನವದೆಹಲಿ: ಭಾರತ ಕ್ರಿಕೆಟ್ ತಂಡದ ಸೂಪರ್ಸ್ಟಾರ್ ವಿರಾಟ್ ಕೊಹ್ಲಿ ಅವರು ಮಂಡಿರಜ್ಜು ಗಾಯಕ್ಕೆ ಒಳಗಾಗಿದ್ದು, ಜೂನ್ 13ರಿಂದ ಆರಂಭವಾಗಲಿರುವ ಅಫ್ಗಾನಿಸ್ತಾನ ವಿರುದ್ಧದ ಏಕದಿನ ಸರಣಿಯಿಂದ ಹೊರಗುಳಿಯಲಿದ್ದಾರೆ.

ಅಫ್ಗಾನಿಸ್ತಾನ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಯು ಜೂನ್ 13ರಂದು ಧರ್ಮಶಾಲಾದಲ್ಲಿ ಆರಂಭವಾಗಲಿದೆ.

‘ತೊಡೆಯ ಸ್ನಾಯು ಸೆಳೆತಕ್ಕೆ ಒಳಗಾಗಿರುವ ಅವರು ಏಕದಿನ ಸರಣಿಯಿಂದ ಹೊರಗುಳಿದಿದ್ದಾರೆ’ ಎಂದು ಬಿಸಿಸಿಐ ಮೂಲಗಳು ಪಿಟಿಐಗೆ ತಿಳಿಸಿವೆ.

37 ವರ್ಷದ ವಿರಾಟ್ ಕೊಹ್ಲಿ ಅವರು ಇತ್ತೀಚೆಗೆ ಮುಕ್ತಾಯಗೊಂಡ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಆರ್ಸಿಬಿ ಟ್ರೋಫಿ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಗುಜರಾತ್ ಟೈಟನ್ಸ್ ವಿರುದ್ಧದ ಫೈನಲ್ ಪಂದ್ಯದಲ್ಲಿಯೂ ಅವರು ಅಜೇಯ 75 ರನ್ ಗಳಿಸಿ ತಂಡದ ಗೆಲುವಿನಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದರು.

ಭಾರತದ ಕ್ರಿಕೆಟ್ ಅಭಿಮಾನಿಗಳು ವಿರಾಟ್ ಕೊಹ್ಲಿ ಅವರನ್ನು ಮೈದಾನದಲ್ಲಿ ನೋಡಲು ಕಾದು ಕುಳಿತಿರುತ್ತಾರೆ. ಈ ಸಂದರ್ಭದಲ್ಲಿ, ಅವರು ಆಡುತ್ತಿಲ್ಲ ಎಂಬ ವಿಚಾರ, ಅಫ್ಗಾನಿಸ್ತಾನ ಸರಣಿ ಮೇಲಿನ ಕಳೆಯನ್ನು ಕುಂದಿಸಿದೆ. ವಿರಾಟ್ ಕೊಹ್ಲಿ ಅವರು ಭಾರತ ತಂಡದ ಪರ ಟೆಸ್ಟ್ ಹಾಗೂ ಟಿ20 ಮಾದರಿಯಿಂದ ನಿವೃತ್ತಿ ಹೊಂದಿದ್ದು, ಏಕದಿನನ ಮಾದರಿಯಲ್ಲಿ ಮಾತ್ರ ಆಡುತ್ತಿದ್ದಾರೆ.

ವಿರಾಟ್ ಕೊಹ್ಲಿ ತಂಡದಿಂದ ದೂರ ಉಳಿಯಲಿದ್ದು, ಭಾರತ ತಂಡದ ಇನ್ನೋರ್ವ ಮಾಜಿ ನಾಯಕ ರೋಹಿತ್ ಶರ್ಮಾ ಮಾತ್ರ ಸರಣಿಯಲ್ಲಿ ಆಡಲಿದ್ದಾರೆ. ಅವರು ಕೂಡ ಐಪಿಎಲ್ ಸಂದರ್ಭದಲ್ಲಿ ಮಂಡಿರಜ್ಜು ಗಾಯಕ್ಕೆ ಒಳಗಾಗಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಅವರು ಸಂಪೂರ್ಣವಾಗಿ ಫಿಟ್ ಆಗಿರುವುದರಿಂದ ತಂಡಕ್ಕೆ ಆಯ್ಕೆ ಮಾಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.