ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಹ್ಲಿಯ ಸತತ ವೈಫಲ್ಯ: ಸಚಿನ್‌ರಿಂದ ನೆರವು ಪಡೆಯಲು ಗವಾಸ್ಕರ್‌ ಸಲಹೆ

Last Updated 26 ಆಗಸ್ಟ್ 2021, 11:11 IST
ಅಕ್ಷರ ಗಾತ್ರ

ಇಂಗ್ಲೆಂಡ್‌ ಪ್ರವಾಸದಲ್ಲಿರುವ ಭಾರತ ತಂಡದ ನಾಯಕ ವಿರಾಟ್‌ ಕೊಹ್ಲಿ ಸತತ ವೈಫಲ್ಯ ಕಾಣುತ್ತಿರುವುದು ಕ್ರೀಡಾಪ್ರೇಮಿಗಳಲ್ಲಿ ಬೇಸರ ಉಂಟುಮಾಡಿದೆ.

ಇಂಗ್ಲೆಂಡ್‌ನಲ್ಲಿ ಆಡಿದ ಕೊನೆಯ ಐದು ಇನ್ನಿಂಗ್ಸ್‌ಗಳಲ್ಲಿ ವಿರಾಟ್‌ ಕೊಹ್ಲಿ ಅವರು 44, 13, 0, 42, ಮತ್ತು 20 ರನ್‌ಗಳನ್ನು ದಾಖಲಿಸುವಲ್ಲಿ ಸಫಲರಾಗಿದ್ದಾರೆ. ಅವರು ಕಳೆದ 50 ಇನಿಂಗ್ಸ್‌ಗಳಲ್ಲಿ ನೂರರ ಗಡಿಯನ್ನೇ ದಾಟದಿರುವುದು ಕ್ರಿಕೆಟ್‌ ವಿಶ್ಲೇಷಕರ ಟೀಕೆಗೆ ಗುರಿಯಾಗಿದೆ.

ವಿರಾಟ್‌ ಕೊಹ್ಲಿ ಅವರು ಇಂಗ್ಲೆಂಡ್‌ನಲ್ಲಿ ನಡೆಯುತ್ತಿರುವ ಮೂರನೇ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಕೇವಲ 7 ರನ್‌ ಗಳಿಸಿ ಔಟಾಗಿದ್ದಾರೆ. ಅನುಭವಿ ವೇಗಿ ಜೇಮ್ಸ್‌ ಆ್ಯಂಡರ್ಸನ್‌ ಅವರಿಗೆ ಒಂದೇ ಸರಣಿಯಲ್ಲಿ ಏಳು ಬಾರಿ ತಮ್ಮ ವಿಕೆಟ್‌ ಅನ್ನು ಕೊಹ್ಲಿ ಒಪ್ಪಿಸಿದ್ದಾರೆ.

ಈ ವಿಚಾರವಾಗಿ ವೀಕ್ಷಕ ವಿವರಣೆಯಲ್ಲಿ ಮಾತನಾಡಿರುವ ಹಿರಿಯ ಆಟಗಾರ ಸುನೀಲ್‌ ಗವಾಸ್ಕರ್‌, 'ವಿರಾಟ್‌ ಕೊಹ್ಲಿ ಮಾಸ್ಟರ್‌ ಬ್ಲಾಸ್ಟರ್‌ ಸಚಿನ್‌ ತೆಂಡೂಲ್ಕರ್‌ ಅವರಿಗೆ ತುರ್ತು ಕರೆ ಮಾಡಿ ಸಲಹೆ ಪಡೆದುಕೊಳ್ಳಬೇಕು. ಈ ಹಿಂದೆ ಸಿಡ್ನಿಯಲ್ಲಿ ನಡೆದ ಟೆಸ್ಟ್‌ ಸರಣಿಯಲ್ಲಿ ಸಚಿನ್‌ ಅವರು ಇದೇ ತೆರನಾದ ಸಂಕಷ್ಟವನ್ನು ಅನುಭವಿಸಿ ನಂತರ ಜಯಿಸಿದ್ದರು' ಎಂದು ಹೇಳಿದ್ದಾರೆ.

ಇಂಗ್ಲೆಂಡ್‌ ವಿರುದ್ಧದ ಮೊದಲ ಪಂದ್ಯ ಡ್ರಾ ನಲ್ಲಿ ಅಂತ್ಯವಾಗಿತ್ತು. ಎರಡನೇ ಪಂದ್ಯವನ್ನು ಭಾರತ 151 ರನ್‌ ಅಂತರದಿಂದ ಗೆದ್ದುಕೊಂಡಿತ್ತು. ಇದೀಗ ಮೂರನೇ ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿರುವ ಭಾರತ ಕೇವಲ 78 ರನ್‌ ಗಳಿಸಿ ಆಲೌಟ್‌ ಆಗಿದೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT