ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ರೀಡೆ ಇಂದಿಗೂ ಪಠ್ಯೇತರ: ವಿರಾಟ್

Last Updated 1 ಏಪ್ರಿಲ್ 2023, 5:58 IST
ಅಕ್ಷರ ಗಾತ್ರ

ಬೆಂಗಳೂರು: ಭಾರತದಲ್ಲಿಯೂ ಇತ್ತೀಚಿನ ವರ್ಷಗಳಲ್ಲಿ ಕ್ರೀಡಾಪಟುಗಳು ಉತ್ತಮ ಸಾಧನೆ ಮಾಡುತ್ತಿದ್ದಾರೆ. ಆದರೂ ಇವತ್ತಿಗೂ ಕ್ರೀಡೆಯು ಪಠ್ಯೇತರ ಚಟುವಟಿಕೆಯಾಗಿಯೇ ಪರಿಗಣಿತವಾಗುತ್ತಿದೆ. ಪಾಲಕರು ತಮ್ಮ ಮಕ್ಕಳ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುತ್ತಾರೆ ಎಂದು ಕ್ರಿಕೆಟಿಗ ವಿರಾಟ್ ಕೊಹ್ಲಿ ಹೇಳಿದರು.

ಶುಕ್ರವಾರ ಪೂಮಾ ಸಂಸ್ಥೆಯು ಏರ್ಪಡಿಸಿದ್ದ ‘ಲೆಟ್‌ ದೇರ್ ಬಿ ಸ್ಪೋರ್ಟ್ಸ್’ ಕಾನಕ್ಲೇವ್‌ನಲ್ಲಿ ಅವರು ಮಾತನಾಡಿದರು.

‘ಮಕ್ಕಳು ಕೂಡ ಇಲ್ಲಿ ಎಚ್ಚರ ವಹಿಸಬೇಕು. ಕ್ರೀಡೆಯಲ್ಲಿ ಭವಿಷ್ಯ ರೂಪಿಸಿಕೊಳ್ಳುವುದು ಸವಾಲಿನ ಕೆಲಸ. ಒಂದೊಮ್ಮೆ ಕ್ರೀಡಾಪಟುಗಳಾಗಿ ರೂಪುಗಳ್ಳುವಲ್ಲಿ ಸಾಧ್ಯವಾಗುವುದಿಲ್ಲವೆಂದು ತಮಗೇ ಅನಿಸಿದಾಗ ಮಕ್ಕಳು ಓದಿನ ಮೇಲೆ ಗಮನವನ್ನು ಸಂಪೂರ್ಣ ಕೇಂದ್ರಿಕರಿಸಬೇಕು’ ಎಂದರು.

ಈ ಸಂದರ್ಭದಲ್ಲಿ ಹಾಜರಿದ್ದ ಭಾರತ ಫುಟ್‌ಬಾಲ್ ತಂಡದ ನಾಯಕ ಸುನೀಲ್ ಚೇಟ್ರಿ, ‘ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವುದರಿಂದ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ಸಾಧ್ಯವಿದೆ. ಆಟವಾಡುವಾಗ ತ್ವರಿತ ನಿರ್ಧಾರಗಳನ್ನು ಕೈಗೊಳ್ಳುವ ಗುಣ ಬೆಳೆಸಿಕೊಳ್ಳುತ್ತೇವೆ. ಇದು ಜೀವನದ ಎಲ್ಲ ಹಂತಗಳಲ್ಲಿಯೂ ಉಪಯುಕ್ತವಾಗುತ್ತದೆ’ ಎಂದರು.

ಪುಮಾ ಇಂಡಿಯಾ ಮತ್ತು ಆಗ್ನೇಯ ಏಷ್ಯಾದ ವ್ಯವಸ್ಥಾಪಕ ನಿರ್ದೇಶಕ ಅಭಿಷೇಕ್ ಗಂಗೂಲಿ ಮತ್ತಿತರರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT