ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿರಾಟ್ ಕೊಹ್ಲಿ ವಿದಾಯ: ಮುಂಬರುವ ಇತರ ಇನ್ನಿಂಗ್ಸ್‌ಗಳಿಗೆ ಶುಭವಾಗಲಿ ಎಂದ ರಾಹುಲ್‌

Last Updated 15 ಜನವರಿ 2022, 16:09 IST
ಅಕ್ಷರ ಗಾತ್ರ

ನವದೆಹಲಿ: ಭಾರತ ಟೆಸ್ಟ್‌ ತಂಡದ ನಾಯಕತ್ವಕ್ಕೆ ವಿರಾಟ್ ಕೊಹ್ಲಿ ಶನಿವಾರ ವಿದಾಯ ಹೇಳಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ‘ಪ್ರೀತಿಯ ವಿರಾಟ್‌ ಕೊಹ್ಲಿ, ಕಳೆದ ಕೆಲ ವರ್ಷಗಳಲ್ಲಿ ನೀವು ಕೋಟ್ಯಂತರ ಕ್ರಿಕೆಟ್ ಅಭಿಮಾನಿಗಳಿಂದ ಪ್ರೀತಿಸಲ್ಪಟ್ಟಿದ್ದೀರಿ. ಈ ಹಂತದಲ್ಲಿಯೂ ಅವರು ನಿಮ್ಮನ್ನು ಬೆಂಬಲಿಸುತ್ತಾರೆ’ ಎಂದು ತಿಳಿಸಿದ್ದಾರೆ.

‘ಮುಂಬರುವ ಇತರ ಇನ್ನಿಂಗ್ಸ್‌ಗಳಿಗೆ ಶುಭಾಶಯಗಳು’ ಎಂದೂ ರಾಹುಲ್‌ ಗಾಂಧಿ ಮಾರ್ಮಿಕವಾಗಿ ಟ್ವೀಟಿಸಿದ್ದಾರೆ.

ವಿರಾಟ್‌ ಕೊಹ್ಲಿ ಅವರು 68 ಟೆಸ್ಟ್ ಪಂದ್ಯಗಳಲ್ಲಿ ಭಾರತ ತಂಡವನ್ನು ಮುನ್ನೆಡೆಸಿದ್ದರು. 40 ಪಂದ್ಯಗಳಲ್ಲಿ ಭಾರತ ತಂಡವು ಗೆಲುವು ಸಾಧಿಸಿತ್ತು. 17 ಟೆಸ್ಟ್‌ಗಳಲ್ಲಿ ಪರಾಭವಗೊಂಡಿದ್ದು, 11 ಪಂದ್ಯಗಳು ಡ್ರಾನಲ್ಲಿ ಕೊನೆಗೊಂಡಿದ್ದವು.

ಎರಡು ತಿಂಗಳ ಹಿಂದೆ ವಿರಾಟ್‌ ಅವರು ಟಿ20 ಹಾಗೂ ಏಕದಿನ ಕ್ರಿಕೆಟ್‌ನ ನಾಯಕತ್ವವನ್ನು ತ್ಯಜಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT