ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತದ ಪರ ಅತಿ ಹೆಚ್ಚು ರನ್; ದ್ರಾವಿಡ್ ದಾಖಲೆ ಮುರಿದ ಕೊಹ್ಲಿ

Last Updated 26 ಸೆಪ್ಟೆಂಬರ್ 2022, 10:37 IST
ಅಕ್ಷರ ಗಾತ್ರ

ಹೈದರಾಬಾದ್: 'ದಿ ವಾಲ್' ಖ್ಯಾತಿಯ ಟೀಮ್ ಇಂಡಿಯಾದ ಮಾಜಿ ನಾಯಕ ರಾಹುಲ್ ದ್ರಾವಿಡ್ ಅವರನ್ನು ಹಿಂದಿಕ್ಕಿರುವ 'ರನ್ ಮೆಶಿನ್' ಖ್ಯಾತಿಯ ವಿರಾಟ್ ಕೊಹ್ಲಿ, ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಭಾರತದ ಎರಡನೇ ಬ್ಯಾಟರ್ ಎನಿಸಿದ್ದಾರೆ.

ಈ ಮೂಲಕ ದಿಗ್ಗಜ ಸಚಿನ್ ತೆಂಡೂಲ್ಕರ್ ನಂತರದ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ.

ಕೊಹ್ಲಿ ಇದುವರೆಗೆ 471 ಪಂದ್ಯಗಳಲ್ಲಿ (525 ಇನ್ನಿಂಗ್ಸ್) 53.62ರ ಸರಾಸರಿಯಲ್ಲಿ ಒಟ್ಟು 24,078 ರನ್ ಗಳಿಸಿದ್ದಾರೆ. ಇದರಲ್ಲಿ 71 ಶತಕ ಹಾಗೂ 125 ಅರ್ಧಶತಕಗಳು ಸೇರಿವೆ.

ಟೀಮ್ ಇಂಡಿಯಾದ ಕೋಚ್ ದ್ರಾವಿಡ್ ಭಾರತದ ಪರ 24,064 ರನ್ ಪೇರಿಸಿದ್ದರು. ಏಷ್ಯಾ ಇಲೆವೆನ್, ಐಸಿಸಿ ವರ್ಲ್ಡ್ ಇಲೆವೆನ್ ತಂಡಗಳ ಪರವಾಗಿಯೂ 144 ರನ್ ಗಳಿಸಿದ್ದರು. ಈ ಮೂಲಕ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಒಟ್ಟು 24,208 ರನ್ ಹೊಂದಿದ್ದಾರೆ.

ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟರ್‌ಗಳ ಪಟ್ಟಿಯಲ್ಲಿ ಮುಂಚೂಣಿಯಲ್ಲಿರುವ ಸಚಿನ್, 664 ಪಂದ್ಯಗಳಲ್ಲಿ (782 ಇನ್ನಿಂಗ್ಸ್) 48.52ರ ಸರಾಸರಿಯಲ್ಲಿ 34,357 ರನ್ ಪೇರಿಸಿದ್ದಾರೆ.

ಹೈದರಾಬಾದ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆದ ಅಂತಿಮ ಟ್ವೆಂಟಿ-20 ಪಂದ್ಯದಲ್ಲಿ ಆಕರ್ಷಕ ಅರ್ಧಶತಕ (63) ಗಳಿಸಿದ ವಿರಾಟ್, ತಂಡದ ಗೆಲುವಿನಲ್ಲಿ ಮಹತ್ವದ ಕಾಣಿಕೆ ನೀಡಿದ್ದರು.

ವೈಟ್ ಬಾಲ್ ಕ್ರಿಕೆಟ್‌ನಲ್ಲಿ (ಏಕದಿನ ಹಾಗೂ ಟ್ವೆಂಟಿ-20) 16,000 ರನ್ ಗಳಿಸಿದ ಎರಡನೇ ಬ್ಯಾಟರ್ ಎಂಬ ಹಿರಿಮೆಗೂ ಕೊಹ್ಲಿ ಭಾಜನರಾಗಿದ್ದಾರೆ.

ಈ ಪಟ್ಟಿಯಲ್ಲೂ ಸಚಿನ್ ತೆಂಡೂಲ್ಕರ್ ನಂತರದ ಸ್ಥಾನದಲ್ಲಿರುವ ಕೊಹ್ಲಿ, 369 ಪಂದ್ಯಗಳಲ್ಲಿ (352 ಇನ್ನಿಂಗ್ಸ್) 55.95ರ ಸರಾಸರಿಯಲ್ಲಿ 16,004 ರನ್ ಗಳಿಸಿದ್ದಾರೆ. ಸೀಮಿತ ಓವರ್‌ಗಳ ಕ್ರಿಕೆಟ್‌ನಲ್ಲಿ ಕೊಹ್ಲಿ 44 ಶತಕ ಹಾಗೂ 97 ಅರ್ಧಶತಕ ಗಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT