ಶನಿವಾರ, ಅಕ್ಟೋಬರ್ 16, 2021
22 °C

IPL 2021: ಐಪಿಎಲ್ ಬಳಿಕ ಆರ್‌ಸಿಬಿ ನಾಯಕತ್ವ ತೊರೆಯಲಿರುವ ಕಿಂಗ್ ಕೊಹ್ಲಿ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ದುಬೈ: ಯುಎಇನಲ್ಲಿ ಪ್ರಸ್ತುತ ಸಾಗುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ 14ನೇ ಆವೃತ್ತಿಯ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯ ಬಳಿಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕತ್ವವನ್ನು ತೊರೆಯುವುದಾಗಿ ವಿರಾಟ್ ಕೊಹ್ಲಿ ಘೋಷಿಸಿದ್ದಾರೆ. 

ಮುಂಬರುವ ಐಸಿಸಿ ಟ್ವೆಂಟಿ-20 ವಿಶ್ವಕಪ್ ಬಳಿಕ ಚುಟುಕು ಕ್ರಿಕೆಟ್‌ನಿಂದ ಟೀಮ್ ಇಂಡಿಯಾದ ನಾಯಕತ್ವ ತೊರೆಯುವುದಾಗಿ ವಿರಾಟ್ ಕೊಹ್ಲಿ ಘೋಷಿಸಿದ್ದರು. 

ಇದನ್ನೂ ಓದಿ: 

ಇದಾದ ಬೆನ್ನಲ್ಲೇ ಕೆಲಸದೊತ್ತಡವನ್ನು ನಿಭಾಯಿಸುವ ನಿಟ್ಟಿನಲ್ಲಿ ಆರ್‌ಸಿಬಿ ನಾಯಕತ್ವಕ್ಕೂ ರಾಜೀನಾಮೆ ನೀಡಲು ವಿರಾಟ್ ನಿರ್ಧರಿಸಿದ್ದಾರೆ. 

ಈ ಕುರಿತು ವಿಡಿಯೊ ಸಂದೇಶದಲ್ಲಿ ವಿರಾಟ್ ಕೊಹ್ಲಿ ವಿವರಿಸಿದ್ದು, ಓರ್ವ ಆಟಗಾರನಾಗಿ ಆರ್‌ಸಿಬಿ ತಂಡದಲ್ಲಿ ಮುಂದುವರಿಯುವುದಾಗಿ ತಿಳಿಸಿದ್ದಾರೆ. ಅಲ್ಲದೆ ತನ್ನಲ್ಲಿ ನಂಬಿಕೆಯನ್ನಿರಿಸಿ ಬೆಂಬಲಿಸಿದ ಎಲ್ಲ ಆರ್‌ಸಿಬಿ ಅಭಿಮಾನಿಗಳಿಗೆ ಧನ್ಯವಾದಗಳನ್ನು ಸಲ್ಲಿಸುವುದಾಗಿ ತಿಳಿಸಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು