ವಿಶಾಖಪಟ್ಟಣ: ಆಂಧ್ರಪ್ರದೇಶದ ವಿಶಾಖಪಟ್ಟಣಕ್ಕೆ ಭೇಟಿ ನೀಡಿದ್ದ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಹಾಗೂ ಆಲ್ರೌಂಡರ್ ವಾಷಿಂಗ್ಟನ್ ಸುಂದರ್ ಅವರು ಶ್ರೀ ವರಾಹ ಲಕ್ಷ್ಮಿನರಸಿಂಹಸ್ವಾಮಿಯ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಕೊಹ್ಲಿ ಮತ್ತು ವಾಷಿಂಗ್ಟನ್ ಸುಂದರ್ ಅವರು ದೇವರ ದರ್ಶನಕ್ಕೂ ಮುನ್ನ ಸಾಂಪ್ರದಾಯಿಕ ಕಪ್ಪಸ್ತಂಭಂ ಅಲಿಂಗನಂ (ಪವಿತ್ರ ಸ್ತಂಭವನ್ನು ಅಪ್ಪಿಕೊಳ್ಳುವುದು) ಆಚರಣೆಯಲ್ಲಿ ಭಾಗವಹಿಸಿದ್ದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ದೇವರ ದರ್ಶನ ಪಡೆದ ಬಳಿಕ ಕೊಹ್ಲಿ ಮತ್ತು ವಾಷಿಂಗ್ಟನ್ ಸುಂದರ್ ಅವರಿಗೆ ವೇದಾಶೀರ್ವಚನ ನೀಡಲಾಯಿತು. ಆನಂತರ ಅವರು ತೀರ್ಥ ಪ್ರಸಾದ ಸ್ವೀಕರಿಸಿದರು ಎಂದು ಅವರು ವಿವರಿಸಿದ್ದಾರೆ.

ಇದೇ ವೇಳೆ ಟೀಮ್ ಇಂಡಿಯಾ ಆಟಗಾರರಿಗೆ ದೇವಾಲಯದ ಶೇಷ ವಸ್ತ್ರವನ್ನು ನೀಡಿ ಸನ್ಮಾನಿಸಲಾಯಿತು ಎಂದು ಅವರು ಹೇಳಿದ್ದಾರೆ.

ಡಿಸೆಂಬರ್ 6ರಂದು ವಿಶಾಖಪಟ್ಟಣದಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಅಂತಿಮ ಏಕದಿನ ಪಂದ್ಯದಲ್ಲಿ ಕನ್ನಡಿಗ ಕೆ.ಎಲ್.ರಾಹುಲ್ ನಾಯಕತ್ವದ ಟೀಮ್ ಇಂಡಿಯಾ ಒಂಬತ್ತು ವಿಕೆಟ್ ಅಂತರದಿಂದ ಗೆಲುವು ಸಾಧಿಸಿತ್ತು. ಇದರೊಂದಿಗೆ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಭಾರತ 2-1 ಅಂತರದಿಂದ ಗೆದ್ದುಕೊಂಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.