ಮೊಹಾಲಿ: ಭಾರತ ಟೆಸ್ಟ್ ಕ್ರಿಕೆಟ್ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಅವರು ವಿಕಲಚೇತನ ಅಭಿಮಾನಿಯೊಬ್ಬರಿಗೆ ವಿಶೇಷ ಉಡುಗೋರೆ ನೀಡುವ ಮೂಲಕ ಹೃದಯ ವೈಶಾಲ್ಯತೆ ಮೆರೆದಿದ್ದಾರೆ.

ಇತ್ತೀಚೆಗೆ ಮೊಹಾಲಿಯ ಐಎಸ್ ಬಿಂದ್ರಾ ಮೈದಾನದಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ 222 ರನ್ ಅಂತರದಿಂದ ಗೆಲುವು ಸಾಧಿಸಿತ್ತು. ಈ ಪಂದ್ಯ ವಿರಾಟ್ ಕೊಹ್ಲಿ ಅವರಿಗೆ 100ನೇ ಟೆಸ್ಟ್ ಪಂದ್ಯವಾಗಿತ್ತು.

ಪಂದ್ಯ ಮುಗಿದ ಬಳಿಕ ವಿಕಲಚೇತನ ಅಭಿಮಾನಿ ಧರ್ಮವೀರ್ ಪಾಲ್ ಅವರು ಕೊಹ್ಲಿ ಅವರನ್ನು ಭೇಟಿಯಾಗಿದ್ದರು. ಇದೇ ವೇಳೆ ಕೊಹ್ಲಿ, ತಮ್ಮ ಜರ್ಸಿಯನ್ನು ಧರ್ಮವೀರ್‌ಗೆ ಉಡುಗೋರೆಯಾಗಿ ನೀಡುವ ಮೂಲಕ ಗಮನ ಸೆಳೆದಿದ್ದಾರೆ. ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಕ್ರೀಡಾಭಿಮಾನಿಗಳ ಮನ ಗೆದ್ದಿದೆ.

ಈ ವಿಡಿಯೊವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ಧರ್ಮವೀರ್ ಪಾಲ್, ‘ವಾವ್, ಇದು ನನ್ನ ಜೀವನದ ಅದ್ಭುತ ದಿನ. ವಿರಾಟ್ ಕೊಹ್ಲಿ ಅವರ 100ನೇ ಟೆಸ್ಟ್ ಪಂದ್ಯವಾಗಿದ್ದು, ಅವರು ನನಗೆ ಟೀ ಶರ್ಟ್ (ಜರ್ಸಿ) ಉಡುಗೊರೆಯಾಗಿ ನೀಡಿದ್ದಾರೆ’ ಎಂದು ಬರೆದುಕೊಂಡಿದ್ದಾರೆ.

ಈ ವಿಡಿಯೊವನ್ನು 10 ಸಾವಿರಕ್ಕೂ ಹೆಚ್ಚು ಮಂದಿ ಇಷ್ಟಪಟ್ಟಿದ್ದು, ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಈ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ವಿರಾಟ್ ಕೊಹ್ಲಿ 45 ರನ್ ಗಳಿಸಿದ್ದರು. ಜತೆಗೆ ಟೆಸ್ಟ್ ಕ್ರಿಕೆಟ್‌ನಲ್ಲಿ 8,000 ರನ್ ಪೂರೈಸಿದ ಸಾಧನೆ ಮಾಡಿದರು.

ಶ್ರೀಲಂಕಾ ವಿರುದ್ಧ ಎರಡನೇ ಟೆಸ್ಟ್ ಪಂದ್ಯ ಮಾರ್ಚ್ 12ರಂದು ಬೆಂಗಳೂರಿನಲ್ಲಿ ಆರಂಭವಾಗಲಿದೆ.

ಓದಿ...ಪಾಕ್ ನಾಯಕಿಯ ಮಗುವಿನೊಂದಿಗೆ ಮುದ್ದಾಟ: ಸ್ಮೃತಿ ಮಂದಾನ ಭಾವನಾತ್ಮಕ ಪೋಸ್ಟ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.