ಗುರುವಾರ, 29 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂಗ್ಲೆಂಡ್‌ ವಿರುದ್ಧದ ಮೊದಲೆರಡು ಟೆಸ್ಟ್ ಪಂದ್ಯದಿಂದ ಹೊರಗುಳಿದ ವಿರಾಟ್ ಕೊಹ್ಲಿ

Published 22 ಜನವರಿ 2024, 11:10 IST
Last Updated 22 ಜನವರಿ 2024, 11:10 IST
ಅಕ್ಷರ ಗಾತ್ರ

ನವದೆಹಲಿ: ಇಂಗ್ಲೆಂಡ್‌ ವಿರುದ್ಧ ನಡೆಯಲಿರುವ ಐದು ಪಂದ್ಯಗಳ ಟೆಸ್ಟ್ ಸರಣಿಯ ಮೊದಲೆರಡು ಪಂದ್ಯಗಳಿಂದ ಭಾರತ ತಂಡದ ಸ್ಟಾರ್‌ ಬ್ಯಾಟರ್ ವಿರಾಟ್ ಕೊಹ್ಲಿ ವೈಯಕ್ತಿಕ ಕಾರಣದಿಂದ ಹೊರಗುಳಿದಿದ್ದಾರೆ ಎಂದು ಬಿಸಿಸಿಐ ಸೋಮವಾರ ತಿಳಿಸಿದೆ.

ಅವರ ಈ ನಿರ್ಧಾರದ ಬಗ್ಗೆ ಯಾವುದೇ ಊಹಾಪೋಹಗಳನ್ನು ಹರಡದಂತೆ ಅಭಿಮಾನಿಗಳು ಹಾಗೂ ಮಾಧ್ಯಮಗಳಿಗೆ ಬಿಸಿಸಿಐ ಮನವಿ ಮಾಡಿದೆ.

ವೈಯಕ್ತಿಕ ಕಾರಣಗಳಿಂದ ಮುಂಬರುವ ಇಂಗ್ಲೆಂಡ್ ವಿರುದ್ಧದ ಐಡಿಎಫ್‌ಸಿ ಫಸ್ಟ್ ಬ್ಯಾಂಕ್ ಟೆಸ್ಟ್ ಸರಣಿಯ ಮೊದಲ ಎರಡು ಟೆಸ್ಟ್‌ಗಳಿಂದ ಹೊರಗುಳಿಯಲಿದ್ದೇನೆ ಎಂದು ವಿರಾಟ್ ಕೊಹ್ಲಿ ಅವರು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಗೆ (ಬಿಸಿಸಿಐ) ಮನವಿ ಮಾಡಿದ್ದಾರೆ’ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಾಯಕ ರೋಹಿತ್ ಶರ್ಮಾ ಮತ್ತು ಟೀಮ್ ಮ್ಯಾನೇಜ್‌ಮೆಂಟ್ ಜೊತೆ ಕೊಹ್ಲಿ ತಮ್ಮ ಈ ನಿರ್ಧಾರವನ್ನು ತಿಳಿಸಿದ್ದಾರೆ ಎಂದು ಬಿಸಿಸಿಐ ಹೇಳಿದೆ.

‘ನಾಯಕ ರೋಹಿತ್ ಶರ್ಮಾ, ತಂಡದ ಮ್ಯಾನೇಜ್‌ಮೆಂಟ್ ಮತ್ತು ಆಯ್ಕೆದಾರರೊಂದಿಗೆ ವಿರಾಟ್ ಮಾತನಾಡಿದ್ದಾರೆ. ದೇಶವನ್ನು ಪ್ರತಿನಿಧಿಸುವುದು ಯಾವಾಗಲೂ ನನ್ನ ಪ್ರಮುಖ ಆದ್ಯತೆಯಾಗಿದೆ ಎಂದು ಅವರು ಹೇಳಿದ್ದಾರೆ. ಆದರೆ ಕೆಲವು ವೈಯಕ್ತಿಕ ಸನ್ನಿವೇಶಗಳು ಅವರ ಉಪಸ್ಥಿತಿಯನ್ನು ಬಯಸುತ್ತವೆ ಎಂದು ಹೇಳಿದ್ದಾರೆ’ ಎಂದು ಪ‍್ರಕಟಣೆ ತಿಳಿಸಿದೆ.

ಬದಲಿ ಆಟಗಾರನನ್ನು ಬಿಸಿಸಿಐ ಶೀಘ್ರದಲ್ಲೇ ಪ್ರಕಟಿಸಲಿದೆ. ಜ.25ರಿಂದ ಹೈದರಾಬಾದ್‌ನಲ್ಲಿ ಮೊದಲ ಟೆಸ್ಟ್ ಪಂದ್ಯ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT