ಮೊಹಾಲಿ: ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಮುಂಬರುವ ಟ್ವೆಂಟಿ-20 ವಿಶ್ವಕಪ್ನಲ್ಲಿ ರೋಹಿತ್ ಶರ್ಮಾ ಜೊತೆಗೆ ಆರಂಭಿಕರಾಗಿಯಾರು ಕಣಕ್ಕಿಳಿಯಲಿದ್ದಾರೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

ಕೆ.ಎಲ್. ರಾಹುಲ್ ಹಾಗೂ ವಿರಾಟ್ ಕೊಹ್ಲಿ ನಡುವೆ ಪೈಪೋಟಿ ಏರ್ಪಟ್ಟಿದೆ. ಆದರೆಈ ಪ್ರಶ್ನೆಗೆ ನಾಯಕ ರೋಹಿತ್ ಶರ್ಮಾ ಅವರೇ ಉತ್ತರ ನೀಡಿದ್ದಾರೆ. ಖಂಡಿತವಾಗಿಯೂ ಆರಂಭಿಕ ಸ್ಥಾನಕ್ಕೆ ವಿರಾಟ್ ಕೊಹ್ಲಿ ಉತ್ತಮ ಆಯ್ಕೆಯಾಗಿದ್ದು, ಆದರೆ ಟ್ವೆಂಟಿ-20 ವಿಶ್ವಕಪ್ನಲ್ಲಿ ನನ್ನ ಜೊತೆಗೆ ಕೆ.ಎಲ್. ರಾಹುಲ್ ಇನ್ನಿಂಗ್ಸ್ ಆರಂಭಿಸಲಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ:ಕೋವಿಡ್; ಆಸ್ಟ್ರೇಲಿಯಾ ಟಿ20 ಸರಣಿಯಿಂದ ಹೊರಬಿದ್ದ ಶಮಿ, ಉಮೇಶ್ ಯಾದವ್ಗೆ ಕರೆ

ಬಹುನಿರೀಕ್ಷಿತ ಟಿ20 ವಿಶ್ವಕಪ್ಗೂ ಮುನ್ನ ಟೀಮ್ ಇಂಡಿಯಾ, ತವರು ನಾಡಿನಲ್ಲಿ ಆಸೀಸ್ ವಿರುದ್ಧ ಮೂರು ಪಂದ್ಯಗಳ ಟ್ವೆಂಟಿ-20 ಸರಣಿಯಲ್ಲಿ ಭಾಗವಹಿಸುತ್ತಿದೆ.ಸರಣಿಗೂ ಪೂರ್ವಭಾವಿಯಾಗಿ ಭಾನುವಾರ ನಡೆದ ಸುದ್ದಿಗೋಷ್ಠಿಯಲ್ಲಿ ರೋಹಿತ್ ಈ ಕುರಿತು ಪ್ರತಿಕ್ರಿಯಿಸಿದ್ದಾರೆ.

ವಿರಾಟ್ ನಮ್ಮ ಮೂರನೇ ಓಪನರ್ ಆಗಿದ್ದಾರೆ. ಹಾಗಾಗಿ ಕೆಲವು ಪಂದ್ಯಗಳಲ್ಲಿ ಇನ್ನಿಂಗ್ಸ್ ಆರಂಭಿಸಲು ವಿರಾಟ್ಗೆ ಅವಕಾಶ ನೀಡಬೇಕು ಎಂದು ರಾಹುಲ್ ಜೊತೆಗೆ ಚರ್ಚಿಸಿದ್ದೇನೆ. ಕಳೆದ ಪಂದ್ಯದಲ್ಲಿ (ಏಷ್ಯಾ ಕಪ್ನಲ್ಲಿ ಅಫ್ಗಾನಿಸ್ತಾನ ವಿರುದ್ಧ) ಓಪನರ್ ಆಗಿ ಅವರೇನು (ವಿರಾಟ್) ಮಾಡಿದ್ದಾರೆಂಬುದು ಎಲ್ಲರಿಗೂ ತಿಳಿದಿದೆ. ನಿಜಕ್ಕೂ ವಿರಾಟ್ ಇನ್ನಿಂಗ್ಸ್ ಬಗ್ಗೆಹೆಮ್ಮೆಯಿದೆ ಎಂದು ಹೇಳಿದ್ದಾರೆ.

ಏಷ್ಯಾ ಕಪ್ನಲ್ಲಿ ಅಫ್ಗಾನಿಸ್ತಾನ ವಿರುದ್ಧ ನಡೆದ 'ಸೂಪರ್ 4' ಹಂತದ ಕೊನೆಯ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಶತಕ ಗಳಿಸಿದ್ದರು. ಇದು ಟ್ವೆಂಟಿ-20 ಅಂತರರಾಷ್ಟ್ರೀಯ ಕ್ರಿಕೆಟ್ನಲ್ಲಿ ಕೊಹ್ಲಿ ಗಳಿಸಿದ್ದ ಮೊದಲ ಶತಕವಾಗಿತ್ತು.

2019 ನವೆಂಬರ್ ಬಳಿಕ ಕೊಹ್ಲಿ ಬಾರಿಸಿದ್ದ ಮೊದಲ ಶತಕವೂ ಇದಾಗಿತ್ತು. ಅಲ್ಲದೆ ಎಲ್ಲ ಮಾದರಿಯ ಕ್ರಿಕೆಟ್ನಲ್ಲೂ ಶತಕ ಗಳಿಸಿದ ಸಾಧನೆ ಮಾಡಿದ್ದರು.

ಟಿ20 ವಿಶ್ವಕಪ್ನಲ್ಲಿ ರಾಹುಲ್ ಇನ್ನಿಂಗ್ಸ್ ಆರಂಭಿಸಲಿದ್ದಾರೆ. ಆರಂಭಿಕ ಸ್ಥಾನದಲ್ಲಿ ನಾವು ಹೆಚ್ಚು ಪ್ರಯೋಗ ಮಾಡಲು ಹೋಗುವುದಿಲ್ಲ. ಅವರು ನಮ್ಮ ತಂಡದ ಪಾಲಿಗೆ ಅತ್ಯಂತಮಹತ್ವದ ಆಟಗಾರನಾಗಿದ್ದು, ಮ್ಯಾಚ್ ವಿನ್ನರ್ ಆಗಿದ್ದಾರೆ ಎಂದು ಹೇಳಿದ್ದಾರೆ.

ಕಳೆದ ಎರಡು-ಮೂರು ವರ್ಷಗಳಲ್ಲಿ ರಾಹುಲ್ ನಿರ್ವಹಣೆಯೇ ಅದನ್ನು ಸಾರುತ್ತದೆ. ಈ ಬಗ್ಗೆ ನಮಗೆ ಸ್ಪಷ್ಟತೆಯಿದೆ. ಯಾವುದೇ ಗೊಂದಲವಿಲ್ಲ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.